Thursday, November 14, 2024

ಶಾಸಕ ಗುರುರಾಜ್ ಗಂಟಿಹೊಳೆ ಮತದಾನ

ಬೈಂದೂರಿನ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಮಂಗಳವಾರ ಬೆಳಗ್ಗೆ ಬಿಜೂರಿನ ಕಂಚಿಕಾನ್ ಸರ್ಕಾರಿ ಶಾಲೆಯ ಬೂತ್ ನಲ್ಲಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ನಂತರ  ಕ್ಷೇತ್ರದ ವಿವಿಧ ಕಡೆಗಳಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು, ಮುಖಂಡರನ್ನು ಭೇಟಿ ಮಾಡಿ, ಶೇ.100ರಷ್ಟು ಮತದಾನ ಆಗುವಂತೆ ನೋಡಿಕೊಳ್ಳಬೇಕು ಮತ್ತು ಬಿಜೆಪಿ ಅಭ್ಯರ್ಥಿಗೆ ಎಲ್ಲ ಬೂತ್ ಗಳಲ್ಲೂ ಲೀಡ್ ಬರುವಂತೆ ಅಂತಿಮ ಹಂತದಲ್ಲಿ ಮತದಾರರ ಮನವೊಲಿಸುವ ಕಾರ್ಯ ಯಶಸ್ವಿಯಾಗಿ ಮಾಡುವಂತೆ ಪ್ರೇರೇಪಿಸಿದರು.
ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡಲು ಬೂತ್ ಕಡೆಗೆ ಸಮೃದ್ಧ ನಡಿಗೆ ಸಹಿತ  ಹಲವು ವಿನೂತನ ಕಾರ್ಯಕ್ರಮ ರೂಪಿಸಿ ಪ್ರಚಾರ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲೂರಿಗೆ ಕರೆದುಕೊಂಡು ಬಂದು, ಆ ಮೂಲಕ ಮೂಕಾಂಬಿಕಾ ಕಾರಿಡಾರ್ ಸಾಕಾರ ಮಾಡಬೇಕು. ಅದು ಸಮೃದ್ಧ ಬೈಂದೂರು ರೂಪಿಸಲ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಶೇ.100ರಷ್ಟು ಮತದಾನಕ್ಕೆ ಒತ್ತು ನೀಡಿದ್ದೇವೆ ಎಂದು ಶಾಸಕರು ತಿಳಿಸಿದರು.
 ಶಾಸಕರಾದ ಗುರುರಾಜ ಗಂಟಿಹೊಳೆ ಅವರು ವಿವಿಧೆಡೆ ಕಾರ್ಯಕರ್ತರೊಂದಿಗೆ ಬೈಕ್ ನಲ್ಲಿ ತೆರಳಿದ್ದು ವಿಶೇಷವಾಗಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!