spot_img
Wednesday, April 1, 2026
spot_img

ಬೈಂದೂರು ಕ್ಷೇತ್ರದಲ್ಲಿ ನವದುರ್ಗೆಯರಿಂದ ಮತದಾನ

ಬೈಂದೂರು: ಶಿವಮೊಗ್ಗ ‌ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಾದ್ಯಂತ ಮಂಗಳವಾರ ಬೆಳಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಈ ಬಾರಿಯ ಮತದಾನದ ವಿಶೇಷವೆಂಬಂತೆ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ನವ ದುರ್ಗೆಯರು(9 ಮಂದಿ ಮಹಿಳೆಯರ ತಂಡ) ಮೊದಲು ಬಂದು ಮತದಾನ ಮಾಡಿದ್ದಾರೆ.
ನವದುರ್ಗೆಯರು ಎಲ್ಲ ಬೂತ್ ಗಳಲ್ಲೂ ಬೆಳಗ್ಗೆ 6.45ರ ಸುಮಾರಿಗೆ ಮತಗಟ್ಟೆ ಪ್ರವೇಶಿಸಿದ್ದರು. 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ 9  ಮಹಿಳೆಯರು ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದ್ದಾರೆ.
ಕ್ಷೇತ್ರದಾದ್ಯಂತ ಮತದಾರ ಉತ್ಸಾಹ
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮತದಾರರು ಅತಿ ಉತ್ಸಾಹದಿಂದ ಮತದಾನ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುವುದು ಜೊತೆಗೆ ಮತದಾನಕ್ಕೆ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡುತ್ತಿದ್ದು ವಿಶೇಷವಾಗಿತ್ತು. ಯುವ ಜನತೆ,  ಮಹಿಳೆಯರು ಸೇರಿದಂತೆ ಎಲ್ಲರೂ ಈ ಮತದಾನ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!