Sunday, September 8, 2024

Karnataka SSLC Result 2024 : ಎಸ್‌ಎಸ್‌ಎಲ್‌ಸಿ ಫಲಿತಾಂಶ ನಾಳೆ ಪ್ರಕಟ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ(ಗುರುವಾರ) ಮೇ 9ರಂದು ಪ್ರಕಟವಾಗಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು https://karresults.nic.in ವೆಬ್‌ಸೈಟ್‌ನಲ್ಲಿ ನಾಳೆ(ಗುರುವಾರ) ಬೆಳಗ್ಗೆ 10.30ರ ಬಳಿಕ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.

ಕರ್ನಾಟಕ ಸರ್ಕಾರದ ಎಸ್ ಎಸ್ ಎಲ್ ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ನಡೆದಿದತ್ತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು ಪರೀಕ್ಷೆ ಬರೆದಿದ್ದರು.

ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಇವರೊಂದಿಗೆ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!