Sunday, September 8, 2024

ʼಕೆಹೆಚ್‌ಪಿಟಿʼಯಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) :  ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(ಕೆಹೆಚ್‌ಪಿಟಿ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕ್ವಾಲಿಟೇಟಿವ್ ರಿಸರ್ಚ್​ ಅಸೋಸಿಯೇಟ್​​​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್​​ಲೈನ್ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಫಿಲ್​, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅನುಭವ: ಅಭ್ಯರ್ಥಿಗಳು ಸಮಾಜಶಾಸ್ತ್ರ, ಮಾನವಶಾಸ್ತ್ರ, ಸಾರ್ವಜನಿಕ ಆರೋಗ್ಯ, ಅಥವಾ ಯಾವುದೇ ಸಂಬಂಧಿತ ಸಾಮಾಜಿಕ ವಿಜ್ಞಾನಗಳಲ್ಲಿ 1-2 ವರ್ಷಗಳ ಅನುಭವವನ್ನು ಹೊಂದಿರಬೇಕು. ಹುದ್ದೆಗೆ ಇನ್ನೂ ವೇತನ ನಿಗದಿಪಡಿಸಿಲ್ಲ. ಅರ್ಜಿ ಸಲ್ಲಿಸುವ ಯಾವ ಅಭ್ಯರ್ಥಿಯೂ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ. ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಉದ್ಯೋಗದ ಸ್ಥಳ: ಬೆಂಗಳೂರು

ಆನ್​ಲೈನ್ ಮೂಲಕ ಅರ್ಜಿ ಹಾಕಲು ಕೆಹೆಚ್‌ಪಿಟಿ ಅಧಿಕೃತ ವೆಬ್‌ಸೈಟನ್ನು ಚೆಕ್‌ ಮಾಡಿ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!