spot_img
Saturday, December 7, 2024
spot_img

SSLC Result 2024 : ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ | ಈ ಬಾರಿಯೂ ಬಾಲಕಿಯರೇ ಮೇಲುಗೈ.

ಜನಪ್ರತಿನಿಧಿ (ಬೆಂಗಳೂರು) :ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು: ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ದಾಖಲಾಗಿದೆ.
ಈ ಬಾರಿಯ ಪರೀಕ್ಷೆಯನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗಿದ್ದು, ಹೀಗಾಗಿ ಶೇಕಡಾ 30ರಷ್ಟು ಫಲಿತಾಂಶ ಕಡಿಮೆಯಾಗಿದೆ. ಹೀಗಾಗಿ ಕೃಪಾಂಕದ ಪ್ರಮಾಣವನ್ನು 10ರಿಂದ 20%ಗೆ ಹೆಚ್ಚಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!