spot_img
Wednesday, January 22, 2025
spot_img

ರಾಜ್ಯಕ್ಕೆ 5ನೆ Rank ಪಡೆದ ಪ್ರತ್ವಿತಾ ಪಿ ಶೆಟ್ಟಿಗೆ ಐ.ಎ.ಎಸ್ ಅಧಿಕಾರಿಯಾಗುವ ಆಸೆ

ಕುಂದಾಪುರ: ಎಕ್ಸ್‌ಲೆಂಟ್ ಮತ್ತು ಲಿಟ್ಲ್‌ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024 ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ರ್‍ಯಾಂಕ್ ಮತ್ತು ಕುಂದಾಪುರ ತಾಲೂಕಿಗೆ ಪ್ರಥಮ ರ್‍ಯಾಂಕ್ ಪಡೆದಿದ್ದಾಳೆ.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಸನ್ಮಾನಿಸಲಾಯಿತು ಮತ್ತು ಸಂಸ್ಥೆಯ ವತಿಯಿಂದ 10 ಸಾವಿರ ನಗದು ಬಹುಮಾನ ನೀಡುವುದರ ಮೂಲಕ ವಿದ್ಯಾರ್ಥಿಯನ್ನು ಗೌರವಿಸಲಾಯಿತು.

ಐ.ಎ.ಎಸ್ ಅಧಿಕಾರಿಯಾಗುವ ಆಸೆ:
ಈ ಸಂದರ್ಭದಲ್ಲಿ ಮಾತನಾಡಿದ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಪತ್ವಿತ ಪಿ ಶೆಟ್ಟಿ ಮುಂದೆ ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಐ.ಏ.ಏಸ್ ಅಧಿಕಾರಿಯಾಗುವ ಆಸೆಯಿದೆ ಎನ್ನುತ್ತಾ, ನಮ್ಮ ಶಾಲೆಯ ಶಿಕ್ಷಕರು ಸಂಜೆ 6 ರ ತನಕ ನಮ್ಮ ಜೊತೆ ನಿಂತು ನಿರಂತರ ತರಬೇತಿ ನೀಡಿರುವುದು ಈ ಅಂಕ ಗಳಿಸಲು ಸಹಕಾರಿಯಾಯಿತು, ಮತ್ತು ನನ್ನ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ಶಾಲೆಯ ಆಡಳಿತ ಮಂಡಳಿ, ಭೋದಕ, ಭೋದಕೇತರ ಸಿಬ್ಬಂಧಿ ವರ್ಗ ಮತ್ತು ಪೋಷಕರಿಗೆ ಚಿರರುಣಿಯಾಗಿದ್ದೇನೆ ಎಂದರು.

ಎಮ್.ಎಮ್.ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಮ್. ಮಹೇಶ ಹೆಗ್ಡೆ ಶುಭಹಾರೈಸಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ ಅವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!