spot_img
Wednesday, January 22, 2025
spot_img

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ : ಪ್ರಮುಖ ಆರೋಪಿ ಮುಸ್ತಫಾ ಪೈಚಾರು ಬಂಧನ !

ಜನಪ್ರತಿನಿಧಿ (ಸುಳ್ಯ) : ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ, ಆರ್‌ಎಸ್‌ಎಸ್‌ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ನಾಲ್ಕನೇ ಆರೋಪಿಯನ್ನು ಇಂದು (ಶುಕ್ರವಾರ, ಮೇ10) ಬಂಧಿಸಲಾಗಿದೆ.

2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸುಳ್ಯದ ಮುಸ್ತಫಾ ಪೈಚಾರು ಎಂಬಾತ ಬಂಧಿತ ಎನ್ನಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗೆ ಆಶ್ರಯ ನೀಡಿದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಮಾಹಿತಿ ಸಿಕ್ಕಿದೆ. 2022ರ ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆ ಮುಂದುವರಿಸಿದೆ. ಆರೋಪಿ ಮುಸ್ತಫಾಗೆ ಎನ್‌ಐಎ ಲುಕ್‌ ಔಟ್‌ ನೋಟೀಸ್‌ ಹೊರಡಿಸಿದ್ದು, ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 20 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಎನ್‌ಐಎ ಚಾರ್ಜ್‌ಶೀಟ್‌ನ ಪ್ರಕಾರ, ಒಂದು ಸಮುದಾಯದ ಸದಸ್ಯರಲ್ಲಿ ಭಯವನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಕೋಮು ದ್ವೇಷ ಹಾಗೂ ಅಶಾಂತಿಯನ್ನು ಸೃಷ್ಟಿಸಲು ಪಿಎಫ್‌ಐನ ಕಾರ್ಯಸೂಚಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು.

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರೇ ಅಂದಿದ್ದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬಾರಿ ಆಕ್ರೋಶ ಹೊರಹಾಕಿದ್ದರು. ಅಂದಿನ ಬಿಜೆಪಿ ರಾಜ್ಯ ಘಟಕ ಹಾಗೂ ದಕ್ಷಿಣ ಕನ್ನಡದ ಹಾಲಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ವಿರುದ್ಧ ಸ್ವತಃ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಸಿಡಿದೆದ್ದಿದ್ದರು. ಆ ಬಳಿಕ ಪ್ರಕರಣವನ್ನು ಎನ್‌ಐಎ ಗೆ ವಹಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!