Sunday, September 8, 2024

ಅರವಿಂದ ಕೇಜ್ರಿವಾಲ್‌ಗೆ ಕೊಂಚ ರಿಲೀಫ್‌ | ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಆದೇಶ !

ಜನಪ್ರತಿನಿಧಿ (ನವದೆಹಲಿ) : ಅಬಕಾರಿ ನೀತಿ ಹಗರಣದಲ್ಲಿ ಸೇರೆಮನೆ ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಜೂನ್ 1 ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದು, ಇದರಿಂದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಂತಾಗಿದೆ.

ಆಮ್ ಆದ್ಮಿ ಪಕ್ಷ ಹಾಗೂ ದಿಲ್ಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ಜಾಮೀನಿಂದ ದೊಡ್ಡ ನಿರಾಳತೆ ಸಿಕ್ಕಂತಾಗಿದೆ. ಆದಾಗ್ಯೂ ಅರವಿಂದ್ ಕೇಜ್ರಿವಾಲ್ ಅವರು ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವಿಲ್ಲ. ಮುಂದಿನ 20 ದಿನಗಳು ಅವರು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಬಹುದಾಗಿದೆ.

ಜೂನ್ 1ರಂದು ಲೋಕಸಭೆ ಚುನಾವಣೆಯ ಕೊನೆಯ ಮತ್ತು ಏಳನೇ ಹಂತದ ಚುನಾವಣೆ ನಡೆಯಲಿದೆ. ಅಲ್ಲಿಯವರೆಗೂ ಕೇಜ್ರಿವಾಲ್ ಅವರು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಬಹುದು. ಜೂನ್ 2ರಂದು ಅವರು ಜೈಲಿನ ಅಧಿಕಾರಿಗಳ ಮುಂದೆ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ

ಅಂತೆಯೇ ಮಾರ್ಚ್ 21ರಂದು ಬಂಧನಕ್ಕೆ ಒಳಗಾದ ಬಳಿಕ ಜಾರಿ ನಿರ್ದೇಶನಾಲಯದ ಲಾಕಪ್ ಹಾಗೂ ತಿಹಾರ್ ಜೈಲಿನಲ್ಲಿ ಸುಮಾರು 50 ದಿನಗಳನ್ನು ಕಳೆದಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!