spot_img
Thursday, April 2, 2026
spot_img

ಹಿಂದೂ ಧರ್ಮದ ನಂಬಿಕೆಯನ್ನು ಅಂತ್ಯಗೊಳಿಸಲು ಕಾಂಗ್ರೆಸ್ ಪಿತೂರಿ ಮಾಡುತ್ತಿದೆ : ಪಿಎಂ ಮೋದಿ ಆಕ್ರೋಶ

ಜನಪ್ರತಿನಿಧಿ (ಮಹಾರಾಷ್ಟ್ರ) : “ನಕಲಿ ಎನ್‌ಸಿಪಿ ಮತ್ತು ಶಿವಸೇನೆ” ಜೂನ್ 4 ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ನೊಂದಿಗೆ ವಿಲೀನವಾಗುದಕ್ಕೆ ಮನಸ್ಸು ಮಾಡಿವೆ, ಕಾಂಗ್ರೆಸ್‌ನೊಂದಿಗೆ ವಿಲೀನಗೊಳ್ಳುವ ಬದಲು ಅಜಿತ್ ಪವಾರ್ ಹಾಗೂ ಏಕನಾಥ್ ಶಿಂಧೆ ಜೊತೆ ಸೇರಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಕಳೆದ 40-50 ವರ್ಷಗಳಿಂದ ಸಕ್ರಿಯವಾಗಿರುವ ಇಲ್ಲಿನ ದೊಡ್ಡ ನಾಯಕರೊಬ್ಬರು ಬಾರಾಮತಿ ಲೋಕಸಭಾ ಸ್ಥಾನದ ಚುನಾವಣೆ ನಂತರ ಚಿಂತಿತರಾಗಿದ್ದಾರೆ. ಅವರು ಜೂನ್ 4 ರ ನಂತರ, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್‌ನೊಂದಿಗೆ ವಿಲೀನವಾಗಲು ನೋಡುತ್ತಿದ್ದಾರೆ ಎಂದು ಶರದ್ ಪವಾರ್ ಹೆಸರು ಹೇಳದೆಯೇ ಪರೋಕ್ಷವಾಗಿ ಪ್ರಧಾನಿ ತಿವಿದಿದ್ದಾರೆ.

ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಿಂದೂ ಧರ್ಮದ ನಂಬಿಕೆಯನ್ನು ಅಂತ್ಯಗೊಳಿಸಲು ಕಾಂಗ್ರೆಸ್ ಪಿತೂರಿ ಮಾಡುತ್ತಿದೆ ಎಂದು ಆರೋಪಿಸಿದರು. ರಾಮ ಮಂದಿರ ಹಾಗೂ ರಾಮನವಮಿ ಉತ್ಸವಗಳು ಭಾರತದ ಕಲ್ಪನೆಗೆ ವಿರುದ್ಧವಾಗಿವೆ ಎಂದು ಕಾಂಗ್ರೆಸ್‌ನ ಶೆಹಜಾದ ಗುರು ಹೇಳಿದ್ದನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ವಿರುದ್ಧ ಅವರು ಹರಿಹಾಯ್ದರು.

ಮೊಘಲ್ ದೊರೆ ಔರಂಗಜೇಬನಂತೆ ಮಹಾರಾಷ್ಟ್ರದಲ್ಲಿ ಸಮಾಧಿ ಮಾಡಲಾಗುತ್ತಿದ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಹೇಳಿಕೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಿದ ಮೋದಿ, ನಕಲಿ ಶಿವಸೇನೆಯವರು ಜೀವಂತ ಸಮಾಧಿ ಮಾಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ನಕಲಿ ಶಿವಸೇನೆಯು ನನ್ನನ್ನು ಜೀವಂತ ಸಮಾಧಿ ಮಾಡಲು ಬಯಸುತ್ತದೆ. ಅವರು ತಮ್ಮ ನೆಚ್ಚಿನ ಮತ ಬ್ಯಾಂಕ್‌ಗೆ ಇಷ್ಟವಾಗುವ ರೀತಿಯಲ್ಲಿ ನನ್ನನ್ನು ನಿಂದಿಸುತ್ತಾರ. ಧರ್ಮದ ಆಧಾರದ ಮೇಲೆ ಕೋಟಾ ಪ್ರಯೋಜನಗಳನ್ನು ನೀಡುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಮೋದಿ ಬದುಕಿರುವವರೆಗೂ ದಲಿತರು, ಆದಿವಾಸಿಗಳು, ಒಬಿಸಿಗಳ ಮೀಸಲಾತಿಯನ್ನು ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ಯಾವುದೇ ಕಾರಣಕ್ಕೂ ನೀಡಲು ಬಿಡುವುದಿಲ್ಲ ಎಂದು ಪ್ರಧಾನಿ ಭರವಸೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!