Wednesday, September 11, 2024

ಬಾಲಾಕೋಟ್‌ನಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆದಿರುವುದರ ಬಗ್ಗೆ ರೇವಂತ್‌ ರೆಡ್ಡಿ ಅನುಮಾನ

ಜನಪ್ರತಿನಿಧಿ (ಹೈದರಾಬಾದ್) : ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ 2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿರುವ ರೇವಂತ್, ‘ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2019ರ ಬಾಲಾಕೋಟ್ ದಾಳಿ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ

ಪುಲ್ವಾಮಾ ದಾಳಿಯನ್ನು ತಡೆಯುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಆರೋಪಿಸಿದ ರೇವಂತ್, ಪುಲ್ವಾಮಾ ಘಟನೆ ಏಕೆ ಸಂಭವಿಸಿತು?, ಗುಪ್ತಚರ ಜಾಲ ಏನು ಮಾಡುತ್ತಿತ್ತು?, ದೇಶದ ಆಂತರಿಕ ಭದ್ರತೆಯನ್ನು ಹೆಚ್ಚಿಸಲು ನೀವು (ಮೋದಿ) ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಖಡಕ್‌ ಆಗಿ ಪ್ರಶ್ನಿಸಿದ್ದಲ್ಲದೇ, ಬಾಲಾಕೋಟ್‌ನಲ್ಲಿ ನಿಜವಾಗಿಯೂ ಸರ್ಜಿಕಲ್ ಸ್ಟ್ರೈಕ್ ನಡೆದಿದೆಯೇ ಎಂಬುದು ಯಾರಿಗೂ ತಿಳಿದಿಲ್ಲ ಎಂದಿದ್ದಾರೆ.

‘ಮೋದಿ ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಾರೆ. ಅವರ ಆಲೋಚನಾ ಕ್ರಮ ಸರಿಯಲ್ಲ. ದೇಶದಲ್ಲಿ ಮೋದಿ ಮತ್ತು ಬಿಜೆಪಿಯನ್ನು ತೊಡೆದು ಹಾಕುವ ಕಾಲ ಬಂದಿದೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

2019ರ ಫೆಬ್ರುವರಿ 14ರಂದು ಸಿಆರ್‌ಪಿಎಫ್ ಬೆಂಗಾವಲು ವಾಹನಕ್ಕೆ ಪಾಕಿಸ್ತಾನದ ಉಗ್ರರು ಸ್ಫೋಟಕ ತುಂಬಿದ್ದ ವಾಹನವನ್ನು ಡಿಕ್ಕಿ ಹೊಡೆಸಿದ್ದರು. ಈ ವೇಳೆ 40 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದರು. ಅದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್‌ನ ಶಂಕಿತ ಉಗ್ರ ಶಿಬಿರದ ಮೇಲೆ ಭಾರತವು ವೈಮಾನಿಕ ದಾಳಿ ನಡೆಸಿತ್ತು.

https://x.com/ANI/status/1789135865475711029

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!