Wednesday, September 11, 2024

ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ | ಈ ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ‘ಮೋದಿ 10 ವರ್ಷ ಬಡವರ ಪರ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಇಂದು(ಶನಿವಾರ) ಪ್ರತಿಕ್ರಿಯಿಸಿದ ಸಿಎಂ, ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ’ ರಾಜಕೀಯವಾಗಿ ಯಾರನ್ನು ಯಾರೂ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಲ್ಲದೇ, ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆಯಾಗಿದೆ ಎಂದಿದ್ದಾರೆ.

‘ಈ ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಬಣ್ಣ ದೇಶದ ಜನರ ಮುಂದೆ ಬಯಲಾಗಿದೆ. ಹತಾಶೆಯಲ್ಲಿ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಮಾತುಗಳು ಜನರಿಗೆ ಗೊತ್ತಿವೆ. ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇ ಬೇಕು’ ಎಂದು ಹೇಳಿದರು.

ಇನ್ನು, ‘ರೈತರ ಸಾಲ ಮನ್ನಾ ಮಾಡಬೇಕು’ ಎಂಬ ಬಿ.ಎಸ್‌. ಯಡಿಯೂರಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಾಲ ಮನ್ನಾ ಮಾಡಿ ಎಂದು ಹಿಂದೆ ಕೇಳಿದಾಗ ಯಡಿಯೂರಪ್ಪ ಏನು ಹೇಳಿದ್ದರು ಗೊತ್ತಾ? ನಮ್ಮ ಬಳಿ ನೋಟ್ ಪ್ರಿಂಟಿಂಗ್ ಮಷಿನ್ ಇದೆಯಾ ಎಂದು ಕೇಳಿರಲಿಲ್ಲವಾ? ಈಗ ಸಾಲ ಮನ್ನಾ ಮಾಡಿ ಎಂದು ಕೇಳುವ ನೈತಿಕತೆ ಇವರಿಗೆ ಇದೆಯಾ?’ ಎಂದು ತಿರುಗೇಟು ನೀಡಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!