spot_img
Thursday, December 5, 2024
spot_img

ಕಾಂಗ್ರೆಸ್‌ ವಿರೋಧ ಪಕ್ಷದ ಸ್ಥಾನಮಾನವನ್ನೂ ಗಳಿಸಿಕೊಳ್ಳಲಾರದು : ಮೋದಿ

ಜನಪ್ರತಿನಿಧಿ (ಒಡಿಶಾ): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 50 ಕ್ಷೇತ್ರಗಳನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.

ಒಡಿಶಾದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳು ಏಕಕಾಲಕ್ಕೆ ನಡೆಯುತ್ತಿವೆ. ಕಂಧಮಾಲ್‌ ಜಿಲ್ಲೆಯ ಫಲ್ಪನಿಯಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಇಂದು(ಶನಿವಾರ) ಪಾಲ್ಗೊಂಡು ಮಾತನಾಡಿದ ಮೋದಿ, ವಿರೋಧ ಪಕ್ಷದ ಸ್ಥಾನಮಾನವನ್ನೂ ಕಾಂಗ್ರೆಸ್ ಗಳಿಸಿಕೊಳ್ಳಲಾರದು ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

‘ರಾಜ್ಯದಲ್ಲಿ ಡಬಲ್‌ ಎಂಜಿನ್ ಸರ್ಕಾರ ರಚನೆಯಾಗಲಿದೆ. ಒಡಿಶಾದ ಭಾಷೆ ಹಾಗೂ ಸಂಸ್ಕೃತಿಯನ್ನು ಅರ್ಥಮಾಡಿಕೊಂಡಿರುವ ಈ ನೆಲದ ಮಗ ಅಥವಾ ಮಗಳನ್ನು ಬಿಜೆಪಿ ಸರ್ಕಾರ ಮುಖ್ಯಮಂತ್ರಿಯನ್ನಾಗಿ ಮಾಡಲಿದೆ’ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.

ಇನ್ನು, ಇದೇ ಸಂದರ್ಭದಲ್ಲಿ, 26 ವರ್ಷಗಳ ಹಿಂದೆ ನಡೆದ ಪೋಬ್ರಾನ್ ಪರೀಕ್ಷೆಗಳು ಭಾರತದ ಖ್ಯಾತಿಯನ್ನು ವಿಶ್ವದಾದ್ಯಂತ ಪಸರಿಸಿದವು ಎಂದು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ಸಾಧನೆಗಳನ್ನು ಸ್ಮರಿಸಿಕೊಂಡರು.

ಮಾತ್ರವಲ್ಲದೇ, ತಮ್ಮ ನೇತೃತ್ವದ ಕೇಂದ್ರ ಸರ್ಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಮೂಲಕ ದೇಶದ ಜನರ 500 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದೆ ಎಂದು ತಮ್ಮನ್ನು ಪ್ರಶಂಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!