spot_img
Wednesday, April 1, 2026
spot_img

ಐಪಿ‌ಎಲ್ ಮಾದರಿಯಲ್ಲಿ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯಾಟ

ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮೊದಲ ಬಾರಿಗೆ “ಭಂಡಾರ್ಕಾರ್ಸ್ ಪ್ರೀಮಿಯರ್ ಲೀಗ್” ಪಂದ್ಯ ವಿದ್ಯಾರ್ಥಿಗಳಿಂದ ನಡೆಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ್ದ ಗೌತಮ್ ಶೆಟ್ಟಿ, ಅಧ್ಯಕ್ಷರು ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಕುಂದಾಪುರ ಅವರು ಮಾತನಾಡಿ ಕ್ರೀಡಾ ಮನೋಭಾವದಿಂದ ಆಡಬೇಕು. ತೀರ್ಪುಗಾರರ ತೀರ್ಮಾನವನ್ನು ಗೌರವಿಸಿ ಸ್ಪರ್ದಾಸ್ಪೂರ್ತಿಯಿಂದ ಆಡಬೇಕು ಎಂದರು.

ಐಪಿ‌ಎಲ್ ಮಾದರಿಯಲ್ಲಿ ೧೫೦ ವಿದ್ಯಾರ್ಥಿ ಆಟಗಾರರನ್ನು ೧೦ ತಂಡಗಳನ್ನಾಗಿ ರಚಿಸಿ ೪ ಓವರ್ ಗಳ ಮ್ಯಾಚ್, ೩ ದಿನಗಳ ಕಾಲ ನಡೆಯಲಿದೆ.

ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ.ಗೊಂಡ, ಐಕ್ಯೂ‌ಎಸಿ ಸಂಯೋಜಕರಾದ ಡಾ. ವಿಜಯಕುಮಾರ್ ಕೆ.ಎಂ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ನಿರ್ದೇಶಕರಾದ ಶಂಕರನಾರಾಯಣ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಖುಷಿ ಕಾರ್ಯಕ್ರಮ ನಿರೂಪಿಸಿ, ಪ್ರಮೀಳಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!