spot_img
Tuesday, March 31, 2026
spot_img

ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

 

ಕುಂದಾಪುರ: ಮೇ ೧೧ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ ಮತ್ತು ರೇಂಜರ್ಸ್ ಮತ್ತು ರೋವರ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಜಯಕಾರ ಶೆಟ್ಟಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ಕಾರ್ಯದರ್ಶಿಗಳಾದ ಸೀತಾರಾಮ ಶೆಟ್ಟಿ ಖಜಾಂಚಿಗಳಾದ ಶಿವರಾಮ ಶೆಟ್ಟಿ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಶರಣ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಸಂಯೋಜಕರಾದ ರಿತಿನ್ ಎಸ್ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಸ್ವಾಗತಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ವಂದಿಸಿದರು.  ಎನ್.ಸಿ.ಸಿ ಕೆಡೆಟ್ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!