spot_img
Wednesday, December 4, 2024
spot_img

ʼಇಂಡಿಯಾʼ ಮೈತ್ರಿಕೂಟ ಸರ್ಕಾರ ರಚನೆಗೆ ನಿಮ್ಮ ಮತಗಳು ಅಮೂಲ್ಯ : ಕಾಂಗ್ರೆಸ್‌

ಜನಪ್ರತಿನಿಧಿ (ನವ ದೆಹಲಿ) : ಕೇಂದ್ರದಲ್ಲಿ ʼಇಂಡಿಯಾʼ ಮೈತ್ರಿಕೂಟ ಸರ್ಕಾರ ಅಧಿಕಾರ ಬರುವುದಕ್ಕೆ ಸಹಾಯ ಕೋರಿ ಜನರಲ್ಲಿ ಕಾಂಗ್ರೆಸ್‌ ಮನವಿ ಮಾಡಿಕೊಂಡಿದೆ.

ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು(ಸೋಮವಾರ) ನಡೆಯುತ್ತಿದ್ದು, ಹತ್ತು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಗಳ ಸುಮಾರು 96 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ, ಯಾವುದೇ ವಿಷಯದಿಂದ ವಿಚಲಿತರಾಗದೇ ಮತದಾನ ಮಾಡಿ ಎಂದು ಅವರು ಕೇಳಿಕೊಂಡಿದ್ದಾರೆ.

ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಜೂನ್‌ 4 ರಂದು ʼಇಂಡಿಯಾʼ ಮೈತ್ರಿಕೂಟದ ಸರ್ಕಾರ ರಚನೆಯಾಗಲಿದೆ ಎನ್ನುವುದನ್ನು ಮೂರು ಹಂತರಗಳ ಮತದಾನಗಳಿಂದ ಸ್ಪಷ್ಟವಾಗಿದೆ. ನಿಮ್ಮ ಒಂದು ಮತವು ನಿಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸುವುದಲ್ಲದೇ ನಿಮ್ಮ ಇಡೀ ಕುಟುಂಬದ ಭವಿಷ್ಯವನ್ನು ಬದಲಾಯಿಸುತ್ತದೆ ಎನ್ನುವುದನ್ನು ನೆನಪಿನಲ್ಲಿಡಿ ಎಂದು ಅವರು ಹೇಳಿದ್ದಾರೆ.

ಇನ್ನು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮನವಿ ಮಾಡಿಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಮೊದಲ ಮೂರು ಹಂತಗಳ ಚುನಾವಣೆಯಲ್ಲಿ ಪ್ರಜಾಪ್ರಭುತ್ವದ ಪರ ಮತ ಚಲಾಯಿಸುವ ಮೂಲಕ ಜನರು ನಿರಂಕುಶ ಶಕ್ತಿಗಳಿಂದ ಸಂವಿಧಾನವನ್ನು ಉಳಿಸಲು ತಮ್ಮ ಶಕ್ತಿ ತೋರಿಸಿದ್ದಾರೆ. ನ್ಯಾಯದ ಪರವಾಗಿ ಮತ ಚಲಾಯಿಸುವ ಮೂಲಕ ಇಂಡಿಯಾ ಮೈತ್ರಿಕೂಟವನ್ನು ಗೆಲ್ಲಿಸಿ. ಸಮಾಜವನ್ನು ವಿಭಜಿಸುವ ದ್ವೇಷಪೂರಿತ ಭಾಚಣಗಳ ದಿಕ್ಕು ತಪ್ಪಿಸುವ ತಂತ್ರಗಳಿಂದ ಹಿಂಜರಿಯಬೇಡಿ ಎಂದು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!