Sunday, September 8, 2024

ಕುಂದಾಪುರ ಬಿ.ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಉದ್ಘಾಟನೆ

ಕುಂದಾಪುರ: ಸುಪ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ದೊರೆತಾಗ ವಿದ್ಯಾರ್ಥಿಗಳಲ್ಲಿನ ಸಭಾಕಂಪನ ಕಡಿಮೆಯಾಗಿ ಮುಂದೆ ಹಲವು ವೇದಿಕೆಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದದ್ದು ಎಂದು ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಪ್ರವಿತಾ ಅಶೋಕ್ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಮಂದರ್ತಿ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಸಂಖ್ಯಾಶಾಸ್ತ್ರ ಉಪನ್ಯಾಸಕ ಪ್ರಭಾಕರ್ ಶೆಟ್ಟಿಗಾರ್, ಕೊಲ್ಲೂರು ಮೂಕಾಂಬಿಕಾ ದೇವಳ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಸಂಯೋಜಕಿ ದೀಪಿಕಾ ಜಿ. ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಸುಧೀರ್ ಕುಮಾರ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!