Sunday, September 8, 2024

ಆಲೂರು ಸರಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ

ಕುಂದಾಪುರ: ಬೈಂದೂರು ಶೈಕ್ಷಣಿಕ ವಲಯದ ಆಲೂರು ಸರಕಾರಿ ಪ್ರೌಢಶಾಲೆ 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚು ವ್ಯಾಸಂಗ ಮಾಡುವ ಈ ಶಾಲೆ ಪ್ರತಿವರ್ಷವೂ ಕೂಡಾ ಶೇ.100 ಫಲಿತಾಂಶದ ಸಾಧನೆ ಮಾಡುತ್ತಿದೆ. ಈ ಬಾರಿ 59 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 12 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 40 ವಿದ್ಯಾರ್ಥಿಗಳು ಪ್ರಥಮ ದರ್ಜೆ, ತೃತೀಯ ದರ್ಜೆಯಲ್ಲಿ 2 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಚೈತ್ರ 625 ರಲ್ಲಿ 597 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸೃಜನ, ರೋಜನ್ , ಆಶಿಕ್ , ಸುಬ್ರಮಣ್ಯ, ವರ್ಷ, ಸುದಕ್ಷಾ , ಮೋಹಿತ್, ಜ್ಯೋತಿ,  ಪ್ರತಿಕ್ಷ ಮತ್ತು ದೀಪ್ತಿ ಈ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ್ದಾರೆ.  ಈ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ನಾರಾಯಣಶೆಟ್ಟಿ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!