spot_img
Sunday, February 15, 2026
spot_img

ಮೇ 16ರಿಂದ 19: ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಉಡುಪಿ: ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮೇ 16 ರಿಂದ 19ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗುತ್ತಿದೆ.

ಸದರಿ ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್‌ನಷ್ಟು ಮಾವು ಮಾರಾಟಕ್ಕೆ ರೈತರು ಆಗಮಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಈ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ 15 ರ ಒಳಗಾಗಿ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ ಮೊ.ನಂ: 9141407672 ಕಚೇರಿ ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!