spot_img
Wednesday, April 1, 2026
spot_img

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಯಾವುದೇ ಸಮಸ್ಯೆ ಇಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಕಾಂಗ್ರೆಸ್‌ಗೆ ಜೆಡಿಎಸ್– ಬಿಜೆಪಿ ಮೈತ್ರಿಯಿಂದ ಯಾವ ಸಮಸ್ಯೆಯೂ ಆಗುವುದಿಲ್ಲ, ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿದ್ದರಾಮಯ್ಯ, ‘ವಿಧಾನಪರಿಷತ್‌ ಚುನಾವಣೆಯಲ್ಲೂ ಕಾಂಗ್ರೆಸ್‌ ಪರವಾದ ವಾತಾವರಣವಿದೆ. ಈ ಬಾರಿ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೀಗಾಗಿಯೇ 6 ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೆವು. ಮತದಾರರನ್ನು ಭೇಟಿಯಾಗಲು ಅವರಿಗೆ ಸಾಕಷ್ಟು ಸಮಯ ದೊರಕಿದೆ ಎಂದರು.

ಪೆನ್‌ಡ್ರೈವ್‌ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರು. ಯಾರು ಸರಿ, ಯಾರು ಸರಿ ಇಲ್ಲ ಎನ್ನುವುದನ್ನು ನಿರ್ಧರಿಸುತ್ತಾರೆ. 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳೇನು, ನಮ್ಮ ಸರ್ಕಾರದ ಸಾಧನೆ ಏನು ಎಂಬುದನ್ನು ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರ ʼಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಪೆನ್‌ಡ್ರೈವ್ ಇದೆʼ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!