spot_img
Wednesday, April 1, 2026
spot_img

ಚುನಾವಣೆಯಿಂದ ಮೋದಿಗೆ ನೀಷೇಧ ಕೋರಿದ್ದ ಅರ್ಜಿ ತಿರಸ್ಕರಿಸಿ ಸುಪ್ರೀಂ ಆದೇಶ

ಜನಪ್ರತಿನಿಧಿ (ನವದೆಹಲಿ) : ದ್ವೇಷ ಭಾಷಣ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣೆ ಸ್ಪರ್ಧೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಎಸ್.ಸಿ. ಶರ್ಮಾ ನೇತೃತ್ವದ ನ್ಯಾಯಪೀಠ ಹೇಳಿದೆ.

ಈ ಸಂಬಂಧ ನೀವು ಅಧಿಕಾರಿಗಳ ಗಮನ ಸೆಳೆದಿದ್ದೀರಾ ಎಂದು ಪ್ರಶ್ನಿಸಿದ ನ್ಯಾಯಾಲಯ, ಮ್ಯಾಂಡಮಸ್ ಮೇಲಿನ ರಿಟ್ ಅರ್ಜಿ ಕುರಿತಂತೆ ನೀವು ಮೊದಲು ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದು ಹೇಳಿದೆ.

ಬಳಿಕ, ಅರ್ಜಿದಾರರು ತಮ್ಮ ಅರ್ಜಿ ಹಿಂಪಡೆದಿದ್ದು, ಮನವಿ ತಿರಸ್ಕರಿಸಲಾಗಿದೆ ಎಂದು ಪೀಠ ಘೋಷಿಸಿದೆ.

ಜನಪ್ರತಿನಿಧಿಗಳ ಕಾಯ್ದೆ ಅಡಿ ಮೋದಿ ಅವರನ್ನು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರುವಂತೆ ಕೋರಿ ಫಾತಿಮಾ ಎಂಬವರು ತಮ್ಮ ವಕೀಲರಾದ ಆನಂದ್‌ ಎಸ್ ಜೋಂಧಲೆ ಅವರ ಮೂಲಕ ಅರ್ಜಿ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!