Thursday, November 21, 2024

ಪ್ರಜ್ವಲ್‌ ರಾಸಲೀಲೆ ಪ್ರಕರಣ : ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳಿಂದ ಮುಖ್ಯಮಂತ್ರಿಗಳಿಗೆ ಪತ್ರ

ಜನಪ್ರತಿನಿಧಿ (ಬೆಂಗಳೂರು) : ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.

ಪ್ರಜ್ವಲ್​ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು. ಕಾಲಮಿತಿಯಲ್ಲಿ ಎಸ್​ಐಟಿ ತನಿಖೆ ನಡೆಯಬೇಕು ಎನ್ನುವುದು ಸೇರಿದಂತೆ 16 ಬೇಡಿಕೆಗಳನ್ನೊಳಗೊಂಡ ಬಹಿರಂಗ ಪತ್ರಕ್ಕೆ ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿ ಸಹಿ ಮಾಡಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣವು ಅತ್ಯಂತ ಹೇಯವಾಗಿದ್ದು, ನಾಗರೀಕ ಸಮಾಜ ತಲೆತಗ್ಗಿಸುವಂತಹುದಾಗಿದೆ. 2900 ವಿಡಿಯೋ ಮತ್ತು ಫೋಟೋಗಳ ದಾಖಲೆ ಇಟ್ಟುಕೊಂಡಿರುವುದು, ಸಂತ್ರಸ್ತರು ದೂರು ನೀಡದಂತೆ ಬೆದರಿಸುವುದು, ಅಪಹರಿಸುವುದು, ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವನ್ನು ಮಾಹಿತಿ ಇರುವ ಯಾರೊಬ್ಬರೂ ಕಾನೂನು ಪಾಲಕರಿಗೆ ತಿಳಿಸದೆ ಮುಚ್ಚಿಟ್ಟಿರುವುದು ಘೋರ ಅಪರಾಧ ಎಂದು ಹೇಳಿದ್ದಾರೆ.

ಸಾಹಿತಿಗಳ, ಬರಹಗಾರರ 16 ಬೇಡಿಕೆಗಳು

  1. ಪ್ರಜ್ವಲ್​ ರೇವಣ್ಣ ಎಲ್ಲಿದ್ದರೂ ಪತ್ತೆ ಮಾಡಿ ಬಂಧಿಸಬೇಕು.
  2. ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಿ, ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು.
  3. ಹಗರಣದ ಆರೋಪ- ಪ್ರತ್ಯಾರೋಪದಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ಕಡಿವಾಣ ಹಾಕಬೇಕು.
  4. ಎಸ್​ಐಟಿ ತನಿಖೆ ಕಾಲಮಿತಿಯಲ್ಲಿ ನಡೆಯಬೇಕು.
  5. ಲೈಂಗಿಕ ಕೃತ್ಯ ಚಿತ್ರೀಕರಣದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಮೊಕದ್ದಮೆ ಹೂಡಬೇಕು.
  6. ಕಾರು ಚಾಲಕ ಕಾರ್ತಿಕ್​ನನ್ನು ಕೂಡಲೇ ಬಂಧಿಸಬೇಕು.
  7. ವಿಡಿಯೋ ತಮ್ಮ ಬಳಿ ಇದೆ ಎಂದ ಹೇಳಿದ ರಾಜಕೀಯ ನಾಯಕ ಮತ್ತು ಕಾರು ಚಾಲಕ ಕಾರ್ತಿಕ್ ಗೌಡ​ ವಿರುದ್ಧ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
  8. ವಿಡಿಯೋಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ದಾಖಲಿಸಬೇಕು.
  9. ವಿಡಿಯೋ ಕುರಿತು ಮಾಹಿತಿ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿಲ್ಲದ ಕಾರಣ ಅವರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು.
  10. ವಿಡಿಯೋ ಹಳೆಯದು ಎಂದು ಎಚ್​ಡಿ ರೇವಣ್ಣ ಹೇಳಿದ್ದಾರೆ. ಅಷ್ಟು ವರ್ಷ ನಡೆಯುತ್ತಿರುವ ಲೈಂಗಿಕ ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ಧಮೆ ಹೂಡಬೇಕು.
  11. ಆರೋಪಿ ದೇಶ ಬಿಟ್ಟು ಹೋಗಲು ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಆಗಬೇಕು.
  12. ಪ್ರಜ್ವಲ್​ ರೇವಣ್ಣ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು.
  13. ಹೆಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು.
  14. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ ಡಿ ರೇವಣ್ಣ ಅವರ ವಿಧಾನಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು.
  15. ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಸರ್ಕಾರಿ ಬಂಗ್ಲೆಯನ್ನು ಅಪರಾಧ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು.
  16. ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳುಳ್ಳ ಪತ್ರವನ್ನು ಬರೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!