Saturday, October 12, 2024

ಶೇ 15ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಲು ಯೋಜನೆ ರೂಪಿಸಿತ್ತು ಕಾಂಗ್ರೆಸ್‌ : ಮೋದಿ ಆರೋಪ

ಜನಪ್ರತಿನಿಧಿ (ನಾಸಿಕ್) : ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ತನ್ನ ಹಿಂದಿನ ಆಡಳಿತದಲ್ಲಿ ಸರ್ಕಾರದ ಬಜೆಟ್‌ನ ಶೇ. 15 ರಷ್ಟು ಹಣವನ್ನು ಹಂಚಿಕೆ ಮಾಡಲು ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಇಂದು ಉತ್ತರ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಪಿಂಪಲ್ಗಾಂವ್ ಬಸವಂತ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಧರ್ಮದ ಆಧಾರದ ಮೇಲೆ ಬಜೆಟ್ ಅನ್ನು ವಿಭಜಿಸುವುದು ಅಪಾಯಕಾರಿ. ಬಜೆಟ್ ಅಥವಾ ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರು ಉದ್ಯೋಗ ಮತ್ತು ಶಿಕ್ಷಣದಲ್ಲಿ ಧರ್ಮ ಆಧಾರಿತ ಮೀಸಲಾತಿಯನ್ನು ದೃಢವಾಗಿ ವಿರೋಧಿಸಿದ್ದರು ಎಂದು ಪ್ರಧಾನಿ ಮೋದಿ ತಿಳಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಒಟ್ಟು ಬಜೆಟ್‌ನಲ್ಲಿ ಶೇ 15ರಷ್ಟು ಹಣವನ್ನು ಅಲ್ಪಸಂಖ್ಯಾತರಿಗೆ ಮೀಸಲಿಡಲು ಯೋಜನೆ ರೂಪಿಸಿತ್ತು ಎಂದು ಮೋದಿ ಆರೋಪಿಸಿದರು.

“ನಾನು(ಗುಜರಾತ್‌ನ) ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಈ ಪ್ರಸ್ತಾವನೆ ತಂದಿತ್ತು. ಬಿಜೆಪಿ ಈ ಕ್ರಮವನ್ನು ಬಲವಾಗಿ ವಿರೋಧಿಸಿತು ಮತ್ತು ಆದ್ದರಿಂದ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ. ಆದರೆ ಕಾಂಗ್ರೆಸ್ ಈ ಪ್ರಸ್ತಾವನೆಯನ್ನು ಮತ್ತೆ ಜಾರಿಗೆ ತರಲು ಬಯಸಿದೆ” ಎಂದು ಪ್ರಧಾನಿ ಹೇಳಿದರು.

ಅಂಬೇಡ್ಕರ್ ಅವರು ಧರ್ಮ ಆಧಾರಿತ ಮೀಸಲಾತಿಯನ್ನು ಬಲವಾಗಿ ವಿರೋಧಿಸಿದ್ದರು. ಆದರೆ ಕಾಂಗ್ರೆಸ್ ಎಸ್‌ಸಿ/ಎಸ್‌ಟಿ/ಒಬಿಸಿಗಳ ಮೀಸಲಾತಿ ಕಸಿದುಕೊಂಡು ಮುಸ್ಲಿಮರಿಗೆ ನೀಡಲು ಬಯಸುತ್ತಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!