spot_img
Wednesday, April 1, 2026
spot_img

ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಬರುವ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ, ಮುಂದಿನ ತಿಂಗಳು ಅಂದರೆ ಜೂನ್ 13ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾ‌ರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ ಪಿ.ಎಂ., ಕೆ.ಪಿ. ನಂಜುಂಡಿ, ಬಿ.ಎಂ. ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾ‌ರ್ ಅವರ ಅವಧಿ ಕೊನೆಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!