spot_img
Thursday, December 5, 2024
spot_img

INDIA ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದರೆ, ಕರ್ನಾಟಕ ಮಾಡೆಲ್‌ ಹರಿಕಾರ ಪಿಎಂ ! : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಜನಪ್ರತಿನಿಧಿ (ಬೆಂಗಳೂರು) : ಲೋಕಸಭಾ ಚುನಾವಣೆಯ 2024 ಯ 5 ನೇ ಹಂತದ ಚುನಾವಣಾ ಪ್ರಕ್ರಿಯೆ ಮುಗಿವಲ್ಲಿಗೆ ಈಗ ಮುಂದೆ ಅಧಿಕಾರಕ್ಕೇರುವ ಸರ್ಕಾರದ ಪ್ರಧಾನಿಯಾರಾಗಲಿದ್ದಾರೆ ಎನ್ನುವ ಕುತೂಹಲ ಮನೆಮಾಡಿದೆ. ಫಲಿತಾಂಶ ಬರುವ ಮುನ್ನ ಉಭಯ ಮೈತ್ರಿ ಪಕ್ಷಗಳು ತಾವೇ ಅಧಿಕಾರಕ್ಕೇರುವುದು ಖಚಿತ ಎನ್ನುವ ವಿಶ್ವಾಸದಲ್ಲಿವೆ.

ಈ ಬಾರಿ ನಿಶ್ಚಿತವಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಕಾಂಗ್ರೆಸ್ ಪಕ್ಷ, ಹಲವು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. ಒಂದು ವೇಳೆ ಕಾಂಗ್ರೆಸ್ ನೇತೃತ್ವದ INDIA ಮೈತ್ರಿಕೂಟ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದರೆ, ಪ್ರಧಾನಿ ಯಾರಾಗಲಿದ್ದಾರೆ? ಎಂಬ ಪ್ರಶ್ನೆಯೂ ಸದ್ಯ ರಾಜಕೀಯ ವಲಯದಲ್ಲಿ ಮೇಲೆದ್ದಿದೆ.

INDIA ಮೈತ್ರಿಕೂಟ ಸರ್ಕಾರ ರಚನೆ ಮಾಡಿದರೆ ಕರ್ನಾಟಕದ ವ್ಯಕ್ತಿಯೊಬ್ಬರು ಪ್ರಧಾನಿಯಾಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಹುಮತ ಪಡೆದ ಬಳಿಕ ಈ ಬಗ್ಗೆ ಚರ್ಚೆ ನಡೆಯಲಿದ್ದು, ಯೋಜನೆಗಳ ಜಾರಿಯ ಆಧಾರದಲ್ಲಿ ಯಾರು ಪ್ರಧಾನಿಯಾಗಲಿದ್ದಾರೆ ಎಂಬುದು ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ ಎಂಬ ಸುದ್ದಿ ಇದ್ದು, ಈ ಬಗ್ಗೆ ಸಿದ್ದರಾಮಯ್ಯ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಗುಜರಾತ್ ಮಾದರಿ ಇಲ್ಲ. ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಬಳಿಕ ಈಗ ಸುದ್ದಿಯಲ್ಲಿರುವುದು ಕೇವಲ ಕರ್ನಾಟಕ ಮಾಡಲ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!