spot_img
Tuesday, March 31, 2026
spot_img

ಮುಂದಿನ ವರ್ಷದೊಳಗೆ 500 ಕೆಪಿಎಸ್‌ ಶಾಲೆಗಳನ್ನು ಪ್ರಾರಂಭಿಸಲು ನಿರ್ಧಾರ : ಸಚಿವ ಮಧು ಬಂಗಾರಪ್ಪ

ಜನಪ್ರತಿನಿಧಿ (ಉಡುಪಿ) :  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಶೇ.20ರಷ್ಟು ಗ್ರೇಸ್‌ ಮಾರ್ಕ್ಸ್‌ ಪದ್ಧತಿಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಧು ಬಂಗಾರಪ್ಪ, ಪರೀಕ್ಷಾ ಪಾರದರ್ಶಕತೆ ಹಾಗೂ ಪಾವಿತ್ರ್ಯತೆ ಕಾಪಾಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸಿದೆ. ಗ್ರೇಸ್‌ ಮಾರ್ಕ್ಸ್‌ ಪದ್ಧತಿ ಪ್ರಸಕ್ತ ವರ್ಷ ಮಾತ್ರ ನೀಡಲಾಗಿದ್ದು ಮುಂಬರವು ವರ್ಷಗಳಲ್ಲಿ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಲಾ ಆರಂಭಕ್ಕೆ ಸಿದ್ಧತೆಗಳು ನಡೆಯುತ್ತಿದ್ದು ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದೆ. ಕೆಪಿಎಸ್‌(ಕರ್ನಾಟಕ ಪಬ್ಲಿಕ್ ಸ್ಕೂಲ್‌) ಶಾಲೆಗಳಿಗೆ ಬೇಡಿಕೆ ಹೆಚ್ಚಳವಾಗಿರುವ ಕಾರಣದಿಂದ ಮುಂದಿನ ವರ್ಷ 500 ಕೆಪಿಎಸ್‌ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರವನ್ನು ಸರ್ಕಾರ ಮಾಡಿದೆ. ಮುಂದಿನ ಮೂರು ವರ್ಷಗಳಲ್ಲಿ ಮೂರು ಸಾವಿರ ಸರ್ಕಾರಿ ಶಾಲೆಗಳನ್ನು ತೆರೆಯಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 3 ರಿಂದ 6 ಶಾಲೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!