spot_img
Tuesday, March 31, 2026
spot_img

ಶಿರಾಡಿ ಘಾಟ್‌ನಲ್ಲಿ ಕಾರ್‌, ಟ್ರಕ್ ನಡುವೆ ಅಪಘಾತ | ಒಂದೇ ಕುಟುಂಬದ ಇಬ್ಬರು ದುರ್ಮರಣ

ಜನಪ್ರತಿನಿಧಿ (ಸಕಲೇಶಪುರ) : ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಇಂದು(ಮಂಗಳವಾರ) ಮುಂಜಾನೆ ಎಸ್‌ಯುವಿ ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಐವರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರು ಮಂಗಳೂರು ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ​​ಗ್ರಾಮದವರು ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ವಾಪಾಸ್ಸಾಗುತ್ತಿದ್ದ ವೇಳೆ ಶಿರಾಡಿ ಘಾಟ್‌ನ ಕೆಂಪುಹೊಳೆ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!