spot_img
Thursday, December 5, 2024
spot_img

ಪ್ರಜ್ವಲ್‌ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಹೇಳಿಕೆ :‌ ಜೆಡಿಎಸ್‌ ದೂರು | ಕಾನೂನು ಕ್ರಮಕ್ಕೆ ಜೆಡಿಎಸ್‌ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರಿಗೆ ದೂರು ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮಾಜಿ ಎಂಎಲ್‌ಸಿ ಹಾಗೂ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಎಚ್‌ಎಂ ರಮೇಶ್ ಗೌಡ ಅವರು ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ದೂರಿನಲ್ಲಿ ಹೇಳಿದ್ದಾರೆ.

ಮೇ 2ರಂದು ಶಿವಮೊಗ್ಗ ಹಾಗೂ ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ರಾಹುಲ್‌ ಗಾಂಧಿ ಹೇಳಿಕೆ ರಾಷ್ಟ್ರ ಮಟ್ಟದ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೂ ಗ್ರಾಸವಾಗಿತ್ತು.

ಈ ಬಗ್ಗೆ ದೂರು ನೀಡಿರುವ ಜೆಡಿಎಸ್‌, ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಮಾಸ್ ರೇಪ್ ಎಂದು ರಾಹುಲ್ ಗಾಂಧಿ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಜನತೆ ಮುಂದೆ ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ರಾಹುಲ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್‌ ಗಾಂಧಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿದೆ.

ಮಾತ್ರವಲ್ಲದೇ, ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ರಾಹುಲ್ ಗಾಂಧಿ ನಿರ್ದಿಷ್ಟ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಅತ್ಯಾಚಾರಕ್ಕೊಳಗಾದ 400 ಮಹಿಳೆಯರ ಮಾಹಿತಿ ಹಾಗೂ ವಿವರಗಳು ಅವರಿಗೆ ಗೊತ್ತಿದ್ದೇಯೆ ಅಥವಾ ಉದ್ದೇಶಪೂರ್ವಕವಾಗಿ ವಿವರಗಳನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!