Sunday, September 8, 2024

ಹೆಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ವಿಸ್ತರಿಸಿದ ರಾಜ್ಯ ಸರ್ಕಾರ | ಜೂನ್ 12ರವರೆಗೆ ಯಾವುದೇ ಕಠಿಣ ಕ್ರಮವಿಲ್ಲ !

ಜನಪ್ರತಿನಿಧಿ (ಬೆಂಗಳೂರು) :  ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ.

ಹೌದು, 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡುವ ಗಡುವನ್ನು ರಾಜ್ಯ ಸರ್ಕಾರ ಜೂನ್ 12 ವರೆಗೆ ವಿಸ್ತರಣೆ ಮಾಡಿದೆ.

ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ, ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಸದ ವಾಹನ ಸವಾರರ ವಿರುದ್ಧ ಜೂ.12ರವರೆಗೂ ಯಾವುದೇ ಕಠಿಣ ಕ್ರಮ ಕೈಗೊಳ್ಳುವುದಿಲ್ಲ  ಎಂದು ತಿಳಿಸಿದೆ.

ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಮಾಡಿರುವ ಬಗ್ಗೆ ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಹಾಗೂ ಇತರರು ಸಲ್ಲಿಸಿದ ಮೇಲ್ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್‌ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ರಜಾಕಾಲದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಈ ಮಾಹಿತಿ ಕೊಟ್ಟಿದೆ.

ನಂಬರ್‌ ಪ್ಲೇಟ್‌ ಸಿದ್ಧಪಡಿಸುವ ಕಂಪನಿಗಳಲ್ಲೊಂದಾದ ಬಿಎನ್‌ಡಿ ಎನರ್ಜಿ ಲಿಮಿಟೆಡ್‌, ನಂಬರ್‌ ಫಲಕ ಅಳವಡಿಸಲು ವಿಧಿಸಿರುವ ಮೇ 31ರ ಗಡುವು ವಿಸ್ತರಿಸಬೇಕೆಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ಸಂದರ್ಭದಲ್ಲಿ ಗಡುವು ಮುಕ್ತಾಯದ ಪರಿಣಾಮವನ್ನು ವಿಭಾಗೀಯ ನ್ಯಾಯಪೀಠ ಪ್ರಶ್ನಿಸಿದಾಗ, ಜೂನ್ 12 ರವರೆಗೆ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಸರ್ಕಾರಿ ವಕೀಲರು ಹೇಳಿದರು. ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜೂನ್ 11 ಕ್ಕೆ ಮುಂದೂಡಿ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!