Saturday, October 12, 2024

ಬೌದ್ಧಿಕ ಆಸ್ತಿ ಹಕ್ಕು ರಕ್ಷಣೆಯ ಮಾಹಿತಿ ಎಲ್ಲರಿಗೂ ಅತ್ಯವಶ್ಯಕ : ಡಾ. ಪ್ರಸನ್ನ ಕಣಿವೆ

ಕೋಟೇಶ್ವರ: ಬೌದ್ಧಿಕ ಆಸ್ತಿ ಹಕ್ಕು ರಕ್ಷಣೆಯ ಸಂಬಂಧ ಸರ್ಕಾರಗಳು ಆಗಿಂದಾಗ್ಗೆ ಸೂಕ್ತ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು, ಜನ ಸಾಮಾನ್ಯರು ಶಿಕ್ಷಣ ಕ್ಷೇತ್ರ ಹಾಗೂ ವ್ಯವಹಾರಿಕ ಕ್ಷೇತ್ರಗಳಲ್ಲಿ ಈ ಕುರಿತು ವ್ಯವಹರಿಸುವಾಗ ಅತಿ ಜಾಗರೂಕರಾಗಿರಬೇಕು. ಯಾವುದೇ ಬೌದ್ಧಿಕ ಆಸ್ತಿ ಹಕ್ಕು ಕಾನೂನಿನ ಉಲ್ಲಂಘನೆಯಾದಲ್ಲಿ ಶಿಕ್ಷೆಗೆ ಗುರಿಪಡಬೇಕಾಗುತ್ತದೆ. ಆದುದರಿಂದ ಇಂದಿನ ದಿನಗಳಲ್ಲಿ ಜನ ಸಾಮಾನ್ಯರಲ್ಲಿ ಇವುಗಳ ಬಗ್ಗೆ ಕನಿಷ್ಠ ಜ್ಞಾನದ ಅಗತ್ಯವಿದೆ ಎಂದು ಡಾ. ಪ್ರಸನ್ನ ಕಣಿವೆ, ಪ್ರಾಧ್ಯಾಪಕರು, ಅಲಯನ್ಸ್ ಕಾಲೇಜ್ ಆಫ್ ಲಾ, ಬೆಂಗಳೂರು ಇವರು ತಿಳಿಸಿದರು.

ಇವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ವತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಡಿಫೆಂಡಿಂಗ್ ಓರಿಜಿನಾಲಿಟಿ:- ಎ ವರ್ಕ್‌ಶಾಪ್ ಆನ್ ಇಂಟಲೇಕ್ಚವಲ್ ಪ್ರಾಪರ್ಟಿ ರೈಟ್ಸ್ ಎಂಬ ವಿಷಯದ ಕುರಿತಾಗಿ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿ ಇಂತಹ ಮಾಹಿತಿ ಕಾರ್ಯಾಗಾರಗಳನ್ನು ಆಯೋಜನೆ ಮಾಡುವುದರ ಮೂಲಕ ಈ ವಿಷಯದಲ್ಲಿ ವಿದ್ಯಾರ್ಥಿಗಳಲ್ಲಿರುವ ಸಂದೇಹಗಳನ್ನು ಪರಿಹರಿಸಿ, ವಿಷಯ ವಿಜ್ಞಾನದೊಂದಿಗೆ ಆಳವಾದ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರಾಮರಾಯ ಆಚಾರ್ಯ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳು, ನಾಗರಾಜ ಯು, ಸಂಚಾಲಕರು, ಆಂತರಿಕ ಗುಣಮಟ್ಟ ಭರವಸಾ ಕೋಶ, ವಿದ್ಯಾರ್ಥಿ ಪ್ರತಿನಿಧಿ ಶ್ರೀದೇವಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸುಭಾಷಿತ ಮತ್ತು ತಂಡದವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಗ್ರಂಥಪಾಲಕರಾದ ವೆಟರನ್ ರವಿಚಂದ್ರ ಹೆಚ್.ಎಸ್. ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಸೂರಜ್, ದ್ವಿತೀಯ ಎಂ.ಕಾಂ. ಕಾರ್ಯಕ್ರಮ ನಿರೂಪಿಸಿದರು. ಶ್ರೀದೇವಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!