Sunday, September 8, 2024

24 ಗಂಟೆಯೊಳಗೆ ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೇ ರಘುಪತಿ ಭಟ್‌ ವಿರುದ್ಧ ಕ್ರಮ : ಸುನೀಲ್‌ ಕುಮಾರ್‌ | ಭಟ್ರು ಮೂರು ಬಾರಿ ಎಂಎಲ್‌ಎ ಆದಾಗ ಯಾರಿಗೆ ಬಕೇಟ್‌ ಹಿಡಿದಿದ್ರೋ ಗೊತ್ತಿಲ್ಲ : ಕೋಟ

ಜನಪ್ರತಿನಿಧಿ (ಉಡುಪಿ) : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಗೆ ಇಳಿದಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್  ಬಂಡಾಯದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಪಕ್ಷ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.

ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಕುಮಾರ್, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಅವರು ಇನ್ನು, 24 ಗಂಟೆಯೊಳಗೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಪಕ್ಷದ ನಿಯಮ ಉಲ್ಲಂಘಿಸಿದ ಆಧಾರದ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು. ಇದು ಪಕ್ಷಕ್ಕೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಪಕ್ಷ ವಿರೋಧಿ ಚಟುವಟಿಕೆ ಅಥವಾ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಆದಿದ್ದರು ಅವರ ಮೇಲೆ ಪಕ್ಷ ಯಾವುದೇ ಮುಲಾಜಿಲ್ಲದೇ ಕ್ರಮಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದ ಸುನೀಲ್‌ ಕುಮಾರ್, ಪಕ್ಷದಲ್ಲಿ ಎಲ್ಲರಿಗೂ ಒಂದೇ ಕ್ರಮ ಹಾಗಾಗಿ ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದು ಅಂತ ಇಲ್ಲ. ಹಾಗಾಗಿ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯುತ್ತಾರೆ ಎಂಬ ವಿಶ್ವಾಸವಿದೆ, ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಅವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಹೇಳಿದರು.

ಈ ಬಗ್ಗೆ ಕುಂದಾಪುರದಲ್ಲಿ ಜನಪ್ರತಿನಿಧಿ ಪತ್ರಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಯಾರೇ ಸ್ಪರ್ಧೆ ಮಾಡಿದರೂ ಕೂಡ ಪಕ್ಷ ಅದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಇದು ವ್ಯಕ್ತಿಗತವಲ್ಲ. ಅಧಿಕೃತ ಅಭ್ಯರ್ಥಿಯ ವಿರುದ್ಧ ಯಾರೂ ಸ್ಪರ್ಧೆ ಮಾಡಬಾರದು ಎಂಬ ನಿಯಮ ನಮ್ಮ ಪಕ್ಷದಲ್ಲಿದೆ. ಪಕ್ಷದ ಅಭ್ಯರ್ಥಿಯ ವಿರುದ್ಧ ಸ್ಪರ್ಧೆ ಮಾಡಿದರೇ ನಮ್ಮ ಪಕ್ಷದಿಂದ ಕ್ರಮ ತೆಗೆದುಕೊಳ್ಳುತ್ತಾರೆ. ಆ ಕ್ರಮವನ್ನಷ್ಟೇ ರಾಜ್ಯ ಬಿಜೆಪಿ ತೆಗೆದುಕೊಳ್ಳುವುದಕ್ಕೆ ಅಧಿಕಾರ ಹೊಂದಿದೆ ಎಂದು ಹೇಳಿದ್ದಾರೆ.

ಇನ್ನು, ಬಕೇಟ್‌ ಹಿಡಿದವರಿಗಷ್ಟೇ ಟಿಕೇಟ್‌ ನೀಡುವ ಪರಿಸ್ಥಿತಿ ಬಿಜೆಪಿಯಲ್ಲಿ ಬಂದಿದೆ ಎಂಬ ರಘುಪತಿ ಭಟ್‌ ಅವರ ಹೇಳಿಕೆಗೆ ತಿರುಗೇಟು ನೀಡಿದ ಪೂಜಾರಿ, ರಘುಪತಿ ಭಟ್‌ ಕೂಡ ಮೂರು ಬಾರಿ ಎಂಎಲ್‌ಎ ಆಗಿದ್ದಾರೆ, ಯಾರಿಗೆ ಬಕೇಟ್‌ ಹಿಡಿದಿದ್ದಾರೋ ಗೊತ್ತಿಲ್ಲ ಎಂದು ಅವರು ಹೇಳಿದರು.

ಇನ್ನು, ಬಂಡಾಯ ಸ್ಪರ್ಧೆಗೆ ಇಳಿದಿರುವ ರಘುಪತಿ ಭಟ್‌ ಅವರನ್ನು ಉಚ್ಛಾಟನೆ ಮಾಡಬೇಕೆಂದು ಉಡುಪಿ ಜಿಲ್ಲಾ ಬಿಜೆಪಿ ರಾಜ್ಯ ಬಿಜೆಪಿಗೆ ನಿನ್ನೆ(ಬುಧವಾರ) ಶಿಫಾರಸ್ಸು ಮಾಡಿತ್ತು ಎನ್ನುವ ಮಾಹಿತಿಯೂ ಇದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!