spot_img
Saturday, June 13, 2026
spot_img

ರಘುಪತಿ ಭಟ್‌ ಬಂಡಾಯ | ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಯನ್ನು ಬಿಜೆಪಿ ಸಹಿಸಲ್ಲ | ಶೀಘ್ರವೇ ಸೂಕ್ತ ಕ್ರಮ : ಕಿಶೋರ್‌ ಕುಮಾರ್ ಕುಂದಾಪುರ

ಜನಪ್ರತಿನಿಧಿ (ಉಡುಪಿ) : ವಿಧಾನ ಪರಿಷತ್‌ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಡಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ವರಿಷ್ಠರಿಗೆ ಶಿಫಾರಸು ಮಾಡಿದ್ದಾರೆ.

ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಗೆ ಇಳಿದಿರುವುದು ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಪಕ್ಷಕ್ಕೆ ಮುಜುಗರ ತರುವ ಕೆಲಸದಲ್ಲಿ ರಘುಪತಿ ಭಟ್‌ ನಿರತರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ. ಚುನಾವಣಾ ಕಣದಿಂದ ನಿವೃತ್ತರಾಗಬೇಕು ಇಲ್ಲದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ ಕುಮಾರ್‌ ಎಚ್ಚರಿಕ ನೀಡಿದ್ದರು.

ಇಂದು(ಶುಕ್ರವಾರ) ಜನಪ್ರತಿನಿಧಿ ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಜನಪ್ರತಿನಿಧಿಯೊಂದಿಗೆ ಮಾತನಾಡಿ, ಪಕ್ಷದ ವಿರುದ್ಧ ನಡೆದುಕೊಂಡವರು ಯಾರೇ ಆಗಲಿ ಅವರಿಗೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ನಮ್ಮ ಪಕ್ಷದಲ್ಲಿ ನಡೆದುಕೊಂಡು ಬಂದ ಸಂಪ್ರದಾಯ. ಪಕ್ಷ ಒಬ್ಬರುನ್ನು ಅಧಿಕೃತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಯನ್ನು ಬಿಜೆಪಿ ಸಹಿಸುವುದಿಲ್ಲ. ನಾವು ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮ ವಹಿಸುತ್ತೇವೆ. ಪಕ್ಷದ  ಜಿಲ್ಲಾ ಘಟಕದಿಂದ ರಘುಪತಿ ಭಟ್‌ ವಿರುದ್ಧ  ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ವರಿಷ್ಠರಿಗೆ ಶಿಫಾರಸ್ಸು ಮಾಡಿದ್ದೇವೆ. ಈಗಾಗಲೇ ಪಕ್ಷದಿಂದ ನೋಟೀಸ್‌ ನೀಡಲಾಗಿದೆ. ಪಕ್ಷ ಇನ್ನೆರಡು ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದಾರೆ.

ಇನ್ನು,ಜನಪ್ರತಿನಿಧಿ ಪತ್ರಿಕೆಯೊಂದಿಗೆ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ ಕುಮಾರ್‌ ಕಾರ್ಕಳ, ರಘುಪತಿ ಭಟ್‌ ಅವರಿಗೆ ಪಕ್ಷದಿಂದ ಈಗಾಗಲೇ ನೋಟೀಸ್‌ ಕೊಟ್ಟಿದ್ದೇವೆ. ಎರಡು ದಿನಗಳ ಸಮಯವಕಾಶ ನೀಡಲಾಗಿದೆ. ನೋಟೀಸ್‌ ಗೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎನ್ನುವುದರ ಮೇಲೆ ಪಕ್ಷ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!