spot_img
Tuesday, March 17, 2026
spot_img

ಕಾಂಗ್ರೆಸ್‌ ಅಧಿಕಾರಕ್ಕೇರಿದರೇ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬೀಗ : ಪ್ರಧಾನಿ ಮೋದಿ

ಜನಪ್ರತಿನಿಧಿ (ಶಿಮ್ಲಾ) : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್‌ ಅಧಿಕಾರಕ್ಕೇರಿದರೇ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬೀಗ ಹಾಕಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೆ ಆರೋಪಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ನ ಷಡ್ಯಂತರವನ್ನು ಕಾಂಗ್ರೆಸ್‌ ಅವರೇ ಬಹಿರಂಗ ಪಡಿಸಿದ್ದಾರೆ. ತಾವು ಅಧಿಕಾರಕ್ಕೆ ಬಂದರೇ ರಾಮ ಮಂದಿರಕ್ಕೆ ಬೀಗ ಹಾಕಿ ಬಾಲರಾಮ ಟೆಂಟ್‌ನಲ್ಲಿ ಕೂರುವುದು ಅನಿವಾರ್ಯವಾಗುವಂತೆ ಮಾಡಲಿದ್ದಾರೆ. ಹೀಗಾಗಿ ಪ್ರತಿ ಮತಗಟ್ಟೆಯಿಂದ ಇವರನ್ನು ಗುಡಿಹಾಕಿಸಬೇಕಿದೆ. ನನ್ನ ಸ್ವಚ್ಛ ಭಾರತ ಅಭಿಯಾನ ನೆನಪಿದೆಯಲ್ಲ, ಜೂನ್‌ ಒಂದರನ್ನು ಅದಕ್ಕಾಗಿ ಮೀಸಲಿಡಿ ಎಂದು ಮೋದಿ ಕರೆ ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌, ಹಿಂದುಳಿದ ವರ್ಗದವರ ಮೀಸಲಾತಿಯನ್ನು ಕಸಿದು ಮುಸ್ಲೀಮರಿಗೆ ನೀಡಿದೆ ಎಂದು ಗಂಭೀರ ಮಾಡಿರುವ ಮೋದಿ, ಕೋಮುವಾದ, ಜಾತೀಯತೆ, ಕುಟುಂಬ ರಾಜಕಾರಣ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷಗಳಲ್ಲಿ ಸಾಮಾನ್ಯ ಎಂದು ದೂಷಿಸಿದ್ದಾರೆ.

ಕಳೆದ ವಾರ ಜಾರ್ಖಂಡ್‌ನಲ್ಲಿ ವಿರೋಧ ಪಕ್ಷಗಳ ವಿರುದ್ಧ ಗುಡುಗಿದ್ದ ಮೋದಿ, ಬಾಲರಾಮನನ್ನು ಮತ್ತೆ ಟೆಂಟ್‌ನಲ್ಲಿ ಕೂರಿಸಲು ಕಾಂಗ್ರೆಸ್‌ ಪಿತೂರಿ ರೂಪಿಸಿದೆ ಎಂದು ಮೋದಿ ಆರೋಪಿಸಿದ್ದರು.

Congress and their friends have revealed a mystery..

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!