Saturday, October 12, 2024

ನೈರುತ್ಯ ಪದವೀಧರ ಕ್ಷೇತ್ರ | ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ರಘುಪತಿ ಭಟ್‌

ಜನಪ್ರತಿನಿಧಿ (ಉಡುಪಿ) : ಯಾವುದೇ ಕಾರಣಕ್ಕೂ ನೈರುತ್ಯ ಪದವೀಧರ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸ್ಪರ್ಧೆಗೆ ಇಳಿದಿದ್ದು ಹಿಂದೆ ಸರಿಯುವುದಕ್ಕೆ ಅಲ್ಲ ಎಂದು ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್‌ ಜನಪ್ರತಿನಿಧಿ ಪತ್ರಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಗೆಲ್ಲುವ ವಿಶ್ವಾಸದಲ್ಲಿದ್ದೇನೆ. ಮತಯಾಚನೆಯಲ್ಲಿ ನಿರತನಾಗಿದ್ದೇನೆ. ನನ್ನ ಸ್ಪರ್ಧೆಗೆ ಉತ್ತಮ ಸ್ಪಂದನೆ ದೊರಕುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕಾರಣಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ವರಿಷ್ಠರಿಗೆ ಶಿಫಾರಸು ಮಾಡಿರುವುದು ಮತ್ತು ಬಿಜೆಪಿಯಿಂದ ನೋಟೀಸ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಭಟ್, ಯಾವುದೇ ನೋಟೀಸ್‌ ತಮಗೆ ಈವರೆಗೆ ದೊರಕಿಲ್ಲ. ದೊರಕಿದ ಮೇಲೆ ಉತ್ತರಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು,‌ ರಘುಪತಿ ಭಟ್ ಕ್ಷೇತ್ರದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಸ್ಪರ್ಧೆಗೆ ಇಳಿದಿರುವುದು ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಪಕ್ಷಕ್ಕೆ ಮುಜುಗರ ತರುವ ಕೆಲಸದಲ್ಲಿ ರಘುಪತಿ ಭಟ್‌ ನಿರತರಾಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಆರೋಪಿಸಿದೆ. ಚುನಾವಣಾ ಕಣದಿಂದ ನಿವೃತ್ತರಾಗಬೇಕು ಇಲ್ಲದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್‌ ಕುಮಾರ್‌ ಎಚ್ಚರಿಕ ನೀಡಿದ್ದರು.

ಮಾತ್ರವಲ್ಲದೇ,ಈಗಾಗಲೇ ರಘುಪತಿ ಭಟ್‌ ಅವರಿಗೆ ಪಕ್ಷದಿಂದ ನೋಟೀಸ್‌ ನೀಡಲಾಗಿದೆ. ಪಕ್ಷ ಇನ್ನೆರಡು ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಜನಪ್ರತಿನಿಧಿಗೆ ತಿಳಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!