spot_img
Thursday, December 5, 2024
spot_img

ನಡುರಾತ್ರಿ ನಡುರಸ್ತೆಯಲ್ಲೇ ಗ್ಯಾಂಗ್‌ ವಾರ್‌ ! ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್‌ | ಆರೋಪಿಗಳ ಬಂಧನ

ಜನಪ್ರತಿನಿಧಿ  (ಉಡುಪಿ) : ಎರಡು ತಂಡಗಳ ನಡುವೆ ಕಾರು ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ನಡು ರಾತ್ರಿಯಲ್ಲಿ ನಗರದ ಕುಂಜಿಬೆಟ್ಟುವಿನ ನಡು ರಸ್ತೆಯಲ್ಲೇ ಎರಡು ಸ್ವಿಫ್ಟ್‌ ಕಾರಿನಲ್ಲೇ ಹೊಡೆದಾಡಿಕೊಂಡ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎರಡು ತಂಡಗಳು ಪರಸ್ಪರ ತಲವಾರು ಹಿಡಿದುಕೊಂಡು ಹೊಡೆದಾಡಿಕೊಂಡ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಈ ಘಟನೆ ಮೇ 18 ರಂದು ನಡೆದಿರುವುದು ಎಂದು ತಿಳಿದು ಬಂದಿದೆ.

ಕಾಪು ತಾಲೂಕಿನ ಎರಡು ತಂಡಗಳು ನಡುರಸ್ತೆಯಲ್ಲೇ ಅಡ್ಡಾದಿಡ್ಡಿ ಕಾರು ಚಲಾಯಿಸಿ ಡಿಕ್ಕಿ ಹೊಡೆದು ಬಡಿದಾಡಿಕೊಂಡ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ವೀಡಿಯೋದಲ್ಲಿ ಗಮನಿಸಬಹುದಾಗಿದೆ. ಹಾಗೂ ಕೆಲ ಹುಡುಗರು ನಡುರಸ್ತೆಯಲ್ಲೇ ಮಾರಕಾಯುಧಗಳಿಂದ ಹೊಡೆದಾಡಿಕೊಂಡಿರುವುದನ್ನೂ ಕಾಣಬಹುದಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ, ಎರಡು ತಂಡಗಳ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ಒದಗಿ ಬಂದಿದೆ.

ಸದ್ಯ, ಜೂನ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಮಾಹಿತಿ ನೀಡಿದ್ದಾರೆ.

(ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ವೀಡಿಯೋ)

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!