spot_img
Wednesday, April 1, 2026
spot_img

ಉಡುಪಿ ಗ್ಯಾಂಗ್‌ ವಾರ್‌ : ಉಳಿದ ಆರೋಪಿಗಳನ್ನು ಬಂಧಿಸಿ ಶೀಘ್ರವೇ ಕಾನೂನು ಕ್ರಮ : ಎಸ್‌ಪಿ ಡಾ. ಅರುಣ್‌ ಕೆ.

ಜನಪ್ರತಿನಿಧಿ (ಉಡುಪಿ) : ಎರಡು ತಂಡಗಳ ನಡುವೆ ಕಾರು ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ನಡು ರಾತ್ರಿಯಲ್ಲಿ ನಗರದ ಕುಂಜಿಬೆಟ್ಟುವಿನ ನಡು ರಸ್ತೆಯಲ್ಲೇ ಎರಡು ಸ್ವಿಫ್ಟ್‌ ಕಾರಿನಲ್ಲೇ ಹೊಡೆದಾಡಿಕೊಂಡ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿರುವ ವಿಚಾರಕ್ಕೆ ಸಂಬಂಧಿದಂತೆ ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಸ್ಪಷ್ಟನೆ ನೀಡಿದ್ದಾರೆ.

ಒಂದೇ ಗ್ಯಾಂಗ್‌ನ ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಮೇ.20 ರಂದು ಉಡುಪಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ಈಗಾಗಲೇ ಅರೆಸ್ಟ್‌ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೃತ್ಯಕ್ಕೆ ಬಳಸಲಾದ ಎರಡು ಸ್ವಿಪ್ಟ್‌ ಕಾರು, ಎರುಡ ದ್ವಿಚಕ್ರ ವಾಹನಗಳು, ಚಾಕು, ತಲ್ವಾರ್ ಗಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ. ತಪ್ಪಿಸಿಕೊಂಡ ಆರೋಪಿಗಳನ್ನು ಬಂಧಿಸುವುದಕ್ಕಾಗಿ ಪತ್ತೆ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

(ಉಡುಪಿ ಜಿಲ್ಲಾ ಎಸ್‌ಪಿ ಡಾ. ಅರುಣ್‌ ಕೆ. ಸ್ಪಷ್ಟನೆ)

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!