Sunday, September 8, 2024

ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಸಭೆ

ಬೈಂದೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಬೈಂದೂರು ಮಂಡಲ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ನಡೆಯಿತು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ಎನ್.ಡಿ.ಎ ಅಭ್ಯರ್ಥಿ ಎಲ್.ಎಸ್. ಭೋಜೇಗೌಡ ಅವರು ಭಾಗವಹಿಸಿ ಚುನಾವಣೆಯ ಮಾಹಿತಿ ನೀಡಿದರು.

ಡಾ. ಧನಂಜಯ ಸರ್ಜಿಯವರು ಮಾತನಾಡಿ, ರಾಜ್ಯದಲ್ಲೇ ಅತಿ ಹೆಚ್ಚು ಪದವೀಧರರನ್ನು ನೀಡುತ್ತಿರುವ ಉಡುಪಿ ಜಿಲ್ಲೆ ಶೈಕ್ಷಣಿಕ ಹಬ್ ಆಗಿ ಬೆಳೆದಿದೆ. ಶಿಕ್ಷಣ, ಆರೋಗ್ಯ ಹಾಗೂ ಬ್ಯಾಂಕಿಂಗ್ ಸೇರಿದಂತೆ ಸೇವಾ ವಲಯದಲ್ಲೂ ಮುಂದಿದೆ. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಬರಬೇಕು. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡಲಾಗುತ್ತದೆ. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಸರ್ಕಾರದ ಜ್ಯೋತಿ ಸಂಜೀವಿನಿ ಯೋಜನೆಯನ್ನು ವಿಸ್ತರಿಸಬೇಕು. ಪದವೀಧರರಿಗೆ ಉದ್ಯೋಗಾವಕಾಶಕ್ಕೆ ಅನುಕೂಲವಾಗುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈಗಾಗಲೇ ನಿರ್ಮಿಸಿರುವ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಮೂಲಕ ಉಚಿತ ತರಬೇತಿಯನ್ನು ನೀಡಲಾಗುತ್ತದೆ ಸರ್ಕಾರ ಮತ್ತು ಪದವೀಧರ ನಡುವಿನ ಕೊಂಡಿಯಾಗಿ ಕೆಲಸ ಮಾಡಲಿದ್ದೇನೆ ಈ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಇನ್ನುಳಿದ ಕೆಲವೇ ದಿನಗಳಲ್ಲಿ ಮತದಾರರನ್ನು ತಲುಪುವ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಹೇಳಿದರು.

ಎಲ್. ಎಸ್. ಭೋಜೇಗೌಡ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಮನಸ್ಸು ಮಾಡುತ್ತಿಲ್ಲ. ಶಿಕ್ಷಕರು ಅನೇಕ ರೀತಿಯಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡಲಿದ್ದೇನೆ. ಎನ್ ಪಿ‌ಎಸ್ ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ ಅನುಷ್ಠಾನ ಮಾಡಲು ಕ್ರಮ ವಹಿಸಬೇಕು. ಶಿಕ್ಷಕರಿಗೆ ಅಗತ್ಯ ಸೌಲಭ್ಯ, ಸೇವಾ ಭದ್ರತೆಯನ್ನು ಸರ್ಕಾರ ಒದಗಿಸಬೇಕು. ಎಲ್ಲ ಶಿಕ್ಷಕ ಮತದಾರರನ್ನು ನಾವುಗಳು ಭೇಟಿಯಾಗಿ ಮತಯಾಚನೆ ಮಾಡಬೇಕು ಎಂದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿಧಾನ ಪರಿಷತ್ ನಲ್ಲಿ ಬಿಜೆಪಿ ಬಹುಮತ ಕಾಪಾಡಿಕೊಳ್ಳಲು ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಎರಡು ಸೀಟುಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಮತದಾರರ ಮನವೊಲಿಸುವ ಕೆಲಸ ಮಾಡಬೇಕು. ಬಿಜೆಪಿ ಮತ್ತು ಎನ್.ಡಿ.ಎ ಅಭ್ಯರ್ಥಿಗಳು ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲು ಸಹಕರಿಸುವಂತೆ ಕೋರಿದರು.

ಶಾಸಕರಾದ ಗುರುರಾಜ್ ಗಂಟಿಹೊಳೆ ಮಾತನಾಡಿ, ಈ ಚುನಾವಣೆಯನ್ನು ನಾವೆಲ್ಲರೂ ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಬಿಜೆಪಿ ಮತ್ತು ಎನ್ ಡಿ‌ಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಎಲ್ಲರೂ ತಮ್ಮ ವಾರ್ಡ್ ಮತ್ತು ಪಂಚಾಯತ್ ವ್ಯಾಪ್ತಿಯಲ್ಲಿರುವ ಪದವೀಧರ, ಶಿಕ್ಷಕ ಮತದಾರರನ್ನು ಸಂಪರ್ಕಿಸಿ ಬಿಜೆಪಿ, ಎನ್‌ಡಿ‌ಎ ಅಭ್ಯರ್ಥಿಗೆ ಮತ ನೀಡುವಂತೆ ಮಾಡಬೇಕು. ಹಾಗೆಯೇ ಮತದಾನದ ಬಗ್ಗೆಯೂ ಜಾಗೃತಿ ಮೂಡಿಸಿ ಯಾವುದೇ ಮತವು ಅಸಿಂಧುವಾಗದಂತೆಯೂ ಅರಿವು ಮೂಡಿಸಬೇಕು ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾದ ಶಿಲ್ಪಾ ಜಿ.ಸುವರ್ಣ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!