spot_img
Wednesday, January 22, 2025
spot_img

ಹರೀಶ್‌ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮಂಗಳೂರು) : ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವಿದೆಯೇ?ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ ಎಂದು ಸಿಎಂ ಹೇಳಿದ್ದಾರೆ.

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ಅನ್ನು ದಾಖಲಿಸಲಾಗಿದ್ದು, ಅದರಂತೆ ಕ್ರಮ‌ ಆಗಲಿದೆ. ಕಾನೂನು ಎಲ್ಲರಿಗೂ ಒಂದೇ. ಇದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲು ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಹರೀಶ್ ಪೂಂಜ ಅವರ ಮೇಲೆ ದಾಖಲಾಗಿದೆ. ಒಂದರಲ್ಲಿ ಸ್ಟೇಷನ್ ಬೇಲ್ ಸಿಕ್ಕಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ? ಕಾನೂನು ಹಾಗೆ ಹೇಳುತ್ತದೆಯಾ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಮಾತ್ರವಲ್ಲದೇ ಜಾಮೀನು ರಹಿತ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಶಾಸಕ ಹರೀಶ್‌ ಪೂಂಜಾ ಅವರನ್ನು ಬಂಧಿಸದೇ ಬಿಡಲು ಸಾಧ್ಯವೇ ? ಶಾಸಕರಾದ ಮಾತ್ರಕ್ಕೆ ಶಿಕ್ಷೆ ಕೊಡಬಾರದು ಎಂದು ಹೇಳುತ್ತದಾ ? ಶಾಸಕರಿಗೆ ಒಂದು ಜನಸಾಮಾನ್ಯರಿಗೆ ಒಂದು ಕಾನೂನು ಇದೆಯೇ ? ಎಂದು ಕೇಳಿದ್ದಾರೆ.

ಇನ್ನು, ಅಪರಾಧ ಯಾರು ಮಾಡಿದರೂ ಅಪರಾಧವೇ. ಇದರಲ್ಲಿ ಯಾವ ಒತ್ತಡವೂ ಇಲ್ಲ, ಇನ್ನೊಂದು ಇಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು  ಆ ಕೆಲಸವವನ್ನು ಪೊಲೀಸ್‌ ಇಲಾಖೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!