spot_img
Tuesday, March 31, 2026
spot_img

ನನಗೆ ಸಂವಿಧಾನ ಸರ್ವಶ್ರೇಷ್ಠ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ : ಮೋದಿ

ಜನಪ್ರತಿನಿಧಿ (ಬಿಹಾರ): ಇಂಡಿಯಾ ಮೈತ್ರಿಕೂಟ ಮುಸ್ಲಿಂ ಮತಗಳನ್ನು ಓಲೈಸಿಕೊಳ್ಳುವುದಕ್ಕೆಬೇಕಾಗಿ ಗುಲಾಮಗಿರಿ ಹಾಗೂ “ಮುಜ್ರಾ”(ನೃತ್ಯ) ಮಾಡುವುದಕ್ಕೂ ತಯಾರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಪಾಟಲಿಪುತ್ರ ಲೋಕಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಲ್ಪಸಂಖ್ಯಾತ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳು “ಮೀಸಲಾತಿಯಿಂದ ವಂಚಿತರಾಗಲು” ಆರ್‌ಜೆಡಿ ಮತ್ತು ಕಾಂಗ್ರೆಸ್‌ ಕಾರಣ ಎಂದು ಆರೋಪಿಸಿದ್ದಲ್ಲದೇ, ದಲಿತರು ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿ ದೋಚುವ ಇಂಡಿಯಾ ಮೈತ್ರಿಕೂಟದ ಪ್ರಯತ್ನಗಳನ್ನು ತಡೆಯುವುದಾಗಿ ಹೇಳಿದ್ದಾರೆ.

“ಸಾಮಾಜಿಕ ನ್ಯಾಯದ ಹೋರಾಟಕ್ಕೆ ಹೊಸ ದಿಕ್ಕನ್ನು ನೀಡಿದ ಭೂಮಿ ಬಿಹಾರ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಮತ್ತು ಅವುಗಳನ್ನು ಮುಸ್ಲಿಮರಿಗೆ ನೀಡುವ ಇಂಡಿಯಾ ಮೈತ್ರಿಕೂಟದ ಯೋಜನೆಯನ್ನು ನಾನು ವಿಫಲಗೊಳಿಸುತ್ತೇನೆ ಎಂದು ಟೀಕಿಸಿದ್ದಾರೆ.

“ನಾನು ಬಿಹಾರ, ಎಸ್‌ಸಿ/ಎಸ್‌ಟಿ/ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕಿರುವವರೆಗೆ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ, ಮೋದಿಗೆ ಸಂವಿಧಾನ ಸರ್ವಶ್ರೇಷ್ಠ, ಮೋದಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. ಇಂಡಿಯಾ ಮೈತ್ರಿಕೂಟ ತಮ್ಮ ಮತ ಬ್ಯಾಂಕ್‌ನ ಜೀತಪದ್ಧತಿಯನ್ನು ಸ್ವೀಕರಿಸಲು ಬಯಸುತ್ತದೆ ಎಂದು ಹರಿಹಾಯ್ದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!