spot_img
Saturday, February 14, 2026
spot_img

ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಗಂಗೊಳ್ಳಿ : ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ ಗಂಗೊಳ್ಳಿ ಇದರ ವತಿಯಿಂದ ಮಾರಿಕಾಂಬಾ ಮಹಿಳಾ ಸಹಕಾರಿ ಸಂಘ ಕೊಡಪಾಡಿ ಗುಜ್ಜಾಡಿ ಸಹಕಾರದೊಂದಿಗೆ ೨೦೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಲ್ಲವ ಯುವ ಮುಖಂಡ ದಿನೇಶ ಬಿಲ್ಲವ ವಹಿಸಿದ್ದರು.

೨೦೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿನಿಯರಾದ ಸಿಂಚನಾ, ಸ್ಫೂರ್ತಿ, ನಿಷ್ಕಲ ಇವರನ್ನು ಸಮ್ಮಾನಿಸಲಾಯಿತು. ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಶುಭಾಶಂಸನೆಗೈದರು. ಮುಖ್ಯ ಅತಿಥಿಯಾಗಿ ಪತ್ರಕರ್ತ ಬಿ.ರಾಘವೇಂದ್ರ ಪೈ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ನಿವೃತ್ತ ಶಿಕ್ಷಕ ದೇವು ಮಾಸ್ಟರ್, ಶ್ರೀ ಇಂದುಧರ ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಅಧ್ಯಕ್ಷೆ ಸುಮಿತ್ರಾ, ಸುರೇಶ ಜಿ., ನರಸಿಂಹ ಎಂ.ಜಿ., ನಾಗರಾಜ ಜಿ.ಎಂ., ಶ್ರೀಕಾಂತ ಎನ್., ಜಿ.ಈಶ್ವರ ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಭೂದೇವಿ ಸ್ವಾಗತಿಸಿದರು. ಅಕ್ಷತಾ ವಿನಯ್ ಕಾರ್ಯಕ್ರಮ ನಿರ್ವಹಿಸಿದರು. ಸುಮಿತ್ರಾ ಜಿ. ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!