spot_img
Wednesday, April 1, 2026
spot_img

ಬಂಡಾಯ ಸ್ಪರ್ಧೆ : ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಜನಪ್ರತಿನಿಧಿ (ಬೆಂಗಳೂರು/ಉಡುಪಿ) : ಬಿಜೆಪಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಘುಪತಿಭಟ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧೆಗಿಳಿದ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ರಘುಪತಿ ಭಟ್‌ ಅವರ ಬಂಡಾಯ ಸ್ಪರ್ಧೆ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾಗಿತ್ತು. ಬಂಡಾಯ ಸ್ಪರ್ಧೆಯ ಬಗ್ಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ಭಟ್‌ ಅವರಿಗೆ ನೋಟೀಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘಪತಿ ಭಟ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ.

ವಿಧಾನಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಕಾರಣಕ್ಕೆ ಪಕ್ಷದಿಂದ ನಿಮ್ಮನ್ನು ಉಚ್ಛಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿರುತ್ತೀರಿ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ. ಆದ್ದರಿಂದ ನಿಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!