spot_img
Saturday, December 7, 2024
spot_img

ಬಿಎಸ್‌ವೈ ಇನ್ನೂ ಸಿಎಂ ಹುದ್ದೆಯಲ್ಲಿದ್ದಾರೆನ್ನುವ ಭ್ರಮೆಯಲ್ಲಿ ವಿಜಯೇಂದ್ರ ಇದ್ದಾರೆ : ಮಧು ಬಿರುನುಡಿ

ಜನಪ್ರತಿನಿಧಿ (ಚಿತ್ರದುರ್ಗ) : ಬಿ. ಎಸ್‌ ಯಡಿಯೂರಪ್ಪ ಇನ್ನೂ ಸಿಎಂ ಹುದ್ದೆಯಲ್ಲಿದ್ದಾರೆ ಎನ್ನುವ ಭ್ರಮೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರಿದ್ದಾರೆ. ಅವರು ಆ ಭ್ರಮೆಯಿಂದ ಮೊದಲು ಹೊರಬೆಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿವಿದಿದ್ದಾರೆ.

ಶಿಕ್ಷಣ ಸಚಿವರ ತಲೆಗೂದಲು ಹಾಗೂ ಸಿನಿಮಾ ಕ್ಷೇತ್ರದ ಆಸಕ್ತಿಯ ಬಗ್ಗೆ ಟೀಕೆ ಮಾಡಿದ್ದ ವಿಜಯೇಂದ್ರ ಅವರಿಗೆ ಮಧು ಬಂಗಾರಪ್ಪ ಅವರು ಇಂದು (ಸೋಮವಾರ) ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ್ದಾರೆ.

ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿರುವ ವಿಜಯೇಂದ್ರ, ಜವಾಬ್ದಾರಿಯಿಂದ ಮಾತನಾಡಬೇಕು. ನನ್ನ ಹೇರ್‌ ಕಟ್‌ ಮಾಡುವವರಿಗೆ ಬಿಡುವಾಗಿಲ್ಲ. ನಿಮಗೆ ಬಿಡುವಿದ್ದರೇ ಬಂದು ಹೇಳಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಲ್ಲದೇ ಸಿನೆಮಾ ಕ್ಷೇತ್ರದ ಬಗ್ಗೆ ವಿಜಯೇಂದ್ರ ಮಾತನಾಡಿರುವುದು ಸರಿ ಅಲ್ಲ ಎಂದು ಹೇಳಿದ್ದಾರೆ.

ಇಷ್ಟು ದಿನ ಶಿಕ್ಷಣ ಕ್ಷೇತ್ರವನ್ನು ಹೊಲಸು ಮಾಡಿದ್ದು ಬಿಜೆಪಿ, ಕಾಂಗ್ರೆಸ್‌ ಶಿಕ್ಷಣ ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವ ಕೆಲಸವನ್ನು ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಕೆಲವು ಬದಲಾವಣೆಗಳು ಕಠಿಣ ಅನ್ನಿಸಿದರೂ ಮಕ್ಕಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಕಳೆದ ವರ್ಷ ನಲವತ್ತಮೂರು ಸಾವಿರ ಅತಿಥಿ ಶಿಕ್ಷಕರ ಸೇವೆ ಪಡೆಯಲಾಗಿತ್ತು. ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಶಿಕ್ಷಣ ಇಲಾಖೆಯಲ್ಲಿಯೂ ಕೆಲವು ಕೊರತೆಗಳಿವೆ. ಹಲವು ವರ್ಷಗಳಿಂದ ಈ ಸಮಸ್ಯೆಗಳು ಹಾಗೆ ಉಳಿದುಕೊಂಡು ಬಂದಿವೆ. ಈ ಸಮಸ್ಯೆ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ಇನ್ನು, ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ವಿಧಾನ ಪರಿಷತ್‌ ಚುನಾವಣೆಯನ್ನು ಈವರೆಗೆ ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸಿರಲಿಲ್ಲ. ವಿಧಾನ ಪರಿಷತ್‌ನಲ್ಲಿ ಪಕ್ಷಕ್ಕೆ ಬಹುಮತದ ಅಗತ್ಯವಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಆಗಿದೆ. ಆರು ಕ್ಷೇತ್ರಗಳಲ್ಲಿ ಗೆಲ್ಲುವ ಉದ್ದೇಶದಿಂದ ಪಕ್ಷದ ಕಾರ್ಯಕರ್ತರು, ಮುಖಂಡರು ಚುನಾವಣೆಗೆ ಕೆಲಸ ಮಾಡುತ್ತಿದ್ದೇವೆ. ಪಕ್ಷದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೆ ಬರಲಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!