Sunday, September 8, 2024

ಶಂಕರನಾರಾಯಣ ಮದರ್ ತೆರೇಸಾ ಶಾಲೆ: ‘ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ’ ಕಾರ್ಯಾಗಾರ

ಶಂಕರನಾರಾಯಣ: ಶಂಕರನಾರಾಯನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಇಲ್ಲಿನ ರೌಪಿಯ ಸಭಾಂಗಣದಲ್ಲಿ ಮೇ.೨೪ರಂದು
ಕಿಂಡರ್ಗಾಟನ್, ಪೂರ್ವಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿ ಶಿಕ್ಷಕರಿಗೆ ‘ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನಾ ಕೌಶಲ್ಯ’ ಕುರಿತು ಕಾರ್ಯಾಗಾರ ನಡೆಯಿತು.

ಪರಿಸರ ತಜ್ಞೆ, ರಾಷ್ಟ್ರಮಟ್ಟದ ವಿಶೇಷ ಸಂಪನ್ಮೂಲ ತರಬೇತಿ ವ್ಯಕ್ತಿ ಎಸ್ ಪಲ್ಲವಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಶಿಕ್ಷಣದಲ್ಲಿ ಪರಿಣಾಮಕಾರಿ ಬೋಧನೇ ಮತ್ತು ಗುಣಾತ್ಮಕ ಶಿಕ್ಷಣದ ಕುರಿತು ತರಬೇತಿ ನೀಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಶಿಕ್ಷಣಕ್ಷೇತ್ರವು ಪೈಪೋಟಿಯಿಂದ ಕೂಡಿದ್ದು ಶಿಕ್ಷಕರು ವಿದ್ಯಾರ್ಥಿಗಳಿಂದ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಸ್ನೇಹಿ ಶಿಕ್ಷಣ ಅತ್ಯಗತ್ಯ ಮತ್ತು ಈ ದಿಸೆಯತ್ತ ಶಿಕ್ಷಕರು ಸಂಯಮದಿಂದ ಸದಾ ಕ್ರಿಯಾಶೀಲರಾಗಿರಬೇಕು ಎಂದು ಶಿಕ್ಷಕರಿಗೆ ಪ್ರಾಯೋಗಿಕವಾಗಿ ಉದಾಹರಣೆಗಳ ಮೂಲಕ ಸೂಕ್ತ ಮಾರ್ಗದರ್ಶನ ನೀಡಿದರು.

ಕಾರ್ಯಾಗಾರದಲ್ಲಿ ಎಲ್ಲಾ ಶಿಕ್ಷಕರು ಅತ್ಯಂತ ಉತ್ಸಾಹದಿಂದ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಆಡಳಿತ ಮಂಡಳಿಯ ಅಧಿಕಾರಿಗಳಾದ ಕುಮಾರಿ ಶಮಿತಾ ರಾವ್, ಕುಮಾರಿ ರೆನಿಟಾ ಲೋಬೊ, ಮತ್ತು ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!