Sunday, September 8, 2024

ಕೋಟೇಶ್ವರ ಸರಕಾರಿ ಪದವಿ ಕಾಲೇಜಿನಲ್ಲಿ ‘ಸಿಂಚನ’ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕುಂದಾಪುರ: ಪ್ರತಿಯೊಬ್ಬ ವಿದ್ಯಾರ್ಥಿ ಕೇವಲ ಪಠ್ಯ ಪುಸ್ತಕದ ಓದಿಗೆ ಸೀಮಿತವಾಗಿರದೇ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುವ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಇತ್ಯಾದಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸದಾ ಉತ್ಸಾಹ ಮತ್ತು ಉಲ್ಲಾಸ ಭರಿತವಾಗಿ ಕಳೆಯಬೇಕು ಎಂದು ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ, ಅಲ್ಬಾಡಿ-ಆರ್ಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಶೇಖರ ಶೆಟ್ಟಿಗಾರ್ ಹೇಳಿದರು.

ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ ಅಂಗವಾಗಿ ನಡೆದ ಸಿಂಚನ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ವಹಿಸಿ, ವಿದ್ಯಾರ್ಥಿ ಜೀವನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ಹಾಗೂ ಐಕ್ಯೂ‌ಎಸಿ ಸಂಚಾಲಕ ನಾಗರಾಜ ಯು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಸಂಚಾಲಕಿ ಡಾ. ಭಾಗೀರಥಿ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಸಿದರು. ಹಾಗೂ ಅತಿಥಿ ಮತ್ತು ತೀರ್ಪುಗಾರರನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಾಂಸ್ಕೃತಿಕ ಪ್ರತಿನಿಧಿ ಅನನ್ಯ ವಂದಿಸಿದರು. ತೀರ್ಪುಗಾರರಾಗಿ ಶೇಖರ ಶೆಟ್ಟಿಗಾರ, ಹರೀಶ್ಚಂದ್ರ ಕೆ ಮತ್ತು ಅರ್ಪಣಾ ಬಾಯಿ ಆಗಮಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!