spot_img
Friday, March 21, 2025
spot_img

ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು | ಬಿಜೆಪಿಯ ಉಚ್ಛಾಟಿತ ರಘುಪತಿ ಭಟ್‌ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್‌

ಜನಪ್ರತಿನಿಧಿ (ಉಡುಪಿ) : ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ ಎಂದು ಮಾಜಿ ಶಾಸಕ ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್ ಕೊಟ್ಟಿದ್ದಾರೆ.

ಈ ಸಂಬಂಧ ತಮ್ಮ ʼಎಕ್ಸ್ʼ ಖಾತೆಯಲ್ಲಿ ಅಲಿಯಾ ಅಸಾದಿ, ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ʼಹಿಜಾಬ್‌ʼ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ನನ್ನನ್ನು ಉಚ್ಛಾಟಿಸಲಾಯಿತು. ಆದರೆ ಈಗ ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ. ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು’ ಎಂದು ಅವರುಬರೆದುಕೊಂಡಿದ್ದಾರೆ.

ಅಂದು ನಾನು ಉಚ್ಛಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಛಾಟಿತ ವ್ಯಕ್ತಿ’ ಎಂದು ಅಲಿಯ ಅಸಾದಿ ರಾಜಕೀಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದಾರೆ.

1795339657984802853

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!