Wednesday, September 11, 2024

ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

ಜನಪ್ರತಿನಿಧಿ (ಬೆಂಗಳೂರು) : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಲೋಕಸಭಾ ಕ್ಷೆತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದ್ದು, ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಇಂದು(ಬುಧವಾರ) ತಿರಸ್ಕರಿಸಿದೆ.

ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ಪರ ವಕೀಲ ಅರುಣ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಅಧಿಕೃತ ಮೂಲಗಳ ಪ್ರಕಾರ, ಪ್ರಜ್ವಲ್ ಅವರು ಮೇ 30 ರಂದು ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಹೇಳಲಾಗಿದ್ದು, ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಜ್ವಲ್ ರೇವಣ್ಣರನ್ನು ಕೆಂಪೆಗೌಡ ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆದ ಏಪ್ರಿಲ್ 27ರಂದೇ ಪ್ರಜ್ವಲ್ ಮತದಾನ ಮಾಡಿ ವಿದೇಶಕ್ಕೆ ಹಾರಿದ್ದರು. ಬಳಿಕ ಅವರದ್ದು ಎಂದು ಹೇಳಲಾದ ಲೈಂಗಿಕ ದೌರ್ಜನ್ಯ ಎಸಗಿರುವ ಪೆನ್‌ಡ್ರೈವ್ ವಿಡಿಯೋಗಳು ಭಾರಿ ಸದ್ದು ಮಾಡಿದ್ದವು. ಇದೇ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಎಚ್ ಡಿ ರೇವಣ್ಣ ಕೂಡ ಬಂಧನಕ್ಕೀಡಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಅಪಹರಣ ಪ್ರಕರಣದಲ್ಲಿ ಅವರ ಧರ್ಮಪತ್ನಿ ಭವಾನಿ ರೇವಣ್ಣಗೂ ಬಂಧನ ಭೀತಿ ಇದ್ದು 31ರಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ಅಂದೇ ಪ್ರಜ್ವಲ್ ಕೂಡ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಮೇ 18 ರಂದು, ಎಸ್‌ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಜೆಡಿಎಸ್ ಪಕ್ಷದಿಂದಲೂ ಅವರನ್ನು ಅಮಾನತು ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!