spot_img
Thursday, December 5, 2024
spot_img

ಜೂ.1ರಂದು ಉಡುಪಿಯಲ್ಲಿ ಸಾಹಿತ್ಯ ಸಹವಾಸ’ ವಿಶಿಷ್ಟ ಕಾರ್ಯಕ್ರಮ

ಉಡುಪಿ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಜೂನ್ 1ರಂದು ಉಡುಪಿಯಲ್ಲಿ ಸಾಹಿತ್ಯ ಸಹವಾಸ’ ಎಂಬ ವಿಶಿಷ್ಟ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ರಾಜ್ಯದ ಸಾಂಸ್ಕೃತಿಕ ಪರಂಪರೆ, ಕನ್ನಡದ ಪ್ರಮುಖ ಸಾಹಿತಿಗಳು, ಮತ್ತು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಂಭ್ರಮಿಸಲು ಇದನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವನ್ನು ಕನ್ನಡದ ಹೆಸರಾಂತ ಸಾಹಿತಿಗಳಾದ ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ ಮತ್ತು ನವ್ಯ ಸಾಹಿತ್ಯ ಚಳುವಳಿ ಕುರಿತು ಅನಂತಮೂರ್ತಿಯವರು ನೀಡಿರುವ ಮೂರು ಉಪನ್ಯಾಸಗಳ ಸುತ್ತ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ, ಅನಂತಮೂರ್ತಿಯವರ ವಿದ್ವತ್ಪೂರ್ಣ ಉಪನ್ಯಾಸಗಳನ್ನು ವಿಶ್ವದೆಲ್ಲೆಡೆ ಇರುವ ಆಸಕ್ತರಿಗೆ ದೊರೆಯುವಂತೆ ಮಾಡಲು, ಇಂಗ್ಲಿಷ್ ಉಪಶೀರ್ಷಿಕೆಗಳೊಂದಿಗೆ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಯೂಟ್ಯೂಬ್ ವಾಹಿನಿಯ ಮೂಲಕ ಬಿಡುಗಡೆ ಮಾಡಲಾಗುವುದು.
ಈ ಉಪನ್ಯಾಸ ಸರಣಿಯು ಇಪ್ಪತ್ತನೇ ಶತಮಾನದ ಕನ್ನಡದ ಪ್ರಮುಖ ಬರಹಗಾರರಾದ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಪಿ. ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ಚಂದ್ರಶೇಖರ ಕಂಬಾರ, ಎ.ಕೆ. ರಾಮಾನುಜನ್ ಮತ್ತು ಗಿರೀಶ್ ಕಾರ್ನಾಡ್ ಅವರ ಕೊಡುಗೆಗಳು ಹಾಗೂ ದಲಿತ ಮುಂತಾದ ಪ್ರಮುಖ ಸಾಹಿತ್ಯಕ ಚಳುವಳಿಗಳ ಮೇಲೆ ಬೆಳಕು ಚೆಲ್ಲುತ್ತವೆ.

ಕನ್ನಡದ ಪ್ರಮುಖ ಸಾಹಿತಿ ಮತ್ತು ಚಿಂತಕ ಲಕ್ಷ್ಮೀಶ ತೋಳ್ಪಾಡಿಯವರು ಕಾರಂತ ಮತ್ತು ಅಡಿಗರ ಕುಟುಂಬದ ಸದಸ್ಯರ ಉಪಸ್ಥಿತಿಯಲ್ಲಿ ಈ ವಿಡಿಯೊ ಸರಣಿಯನ್ನು ಬಿಡುಗಡೆ ಮಾಡಲಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿಯವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯಕ್ಕೆ ಕಾರಂತ ಮತ್ತು ಅಡಿಗರ ಕೊಡುಗೆಯ ಬಗ್ಗೆ ವಿದ್ವತ್ ಗೋಷ್ಠಿ ಮತ್ತು ಭಾಷಣ, ಯಕ್ಷಗಾನ ಪ್ರದರ್ಶನ, ಅಡಿಗರ ಗೀತೆಗಳ ಗಾಯನ, ಪ್ರಮುಖ ಸಾಹಿತಿಗಳ ಚಿತ್ರಾವಳಿ ಪ್ರದರ್ಶನ ಸೇರಿದಂತೆ ಹಲವು ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!