spot_img
Saturday, December 7, 2024
spot_img

ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಟದಲ್ಲಿ ಅತಿಥೇಯ ಕೋಟ-ಪಡುಕರೆ ಪದವಿ ಕಾಲೇಜು ಪ್ರಥಮ

ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆ, ಇತ್ತೀಚಿಗೆ ಆಯೋಜಿಸಿದ್ದ
ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಕ್ರಿಕೆಟ್ ಪಂದ್ಯಾಟವನ್ನು ಆನಂದ್ ಸಿ ಕುಂದರ್, ಪ್ರವರ್ತಕರು,
ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಇವರು ಉದ್ಘಾಟಿಸಿ ಕ್ರಿಕೆಟ್ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ
ವ್ಯಕ್ತಿತ್ವವನ್ನು ಬೆಳೆಸಲು ಸಹಾಯಕವಾಗುತ್ತದೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೋಟ ಪೊಲೀಸ್ ಠಾಣೆಯ ಉಪ ನಿರೀಕ್ಷಕ ತೇಜಸ್ವಿಯವರು ವಿದ್ಯಾರ್ಥಿಗಳು ಪಠ್ಯದೊಂದಿಗೆ, ದೈಹಿಕ ಪಾಠವನ್ನು ತಿಳಿಸುವ ಪಂದ್ಯಾಟಗಳಲ್ಲಿ ಪಾಲ್ಗೊಂಡಾಗ ಜೀವನವನ್ನು ಯಶಸ್ಸುಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ರಮೇಶ್ ಹೆಚ್ ಕುಂದರ್ ವಿಜೇತ ತಂಡಗಳಿಗೆ ನಗದು ಬಹುಮಾನ ಮತ್ತು
ಟ್ರೋಫಿಯನ್ನು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುನೀತ ವಿ
ವಹಿಸಿದ್ದರು. ಪಂದ್ಯಾಟದ ಸಂಘಟಕರು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.
ಮನೋಜ್‌ಕುಮಾರ್ ಎಂ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ಶಂಕರ ನಾಯ್ಕ ಬಿ.ರವರು
ವಂದಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುದಿನ
ಹಾಗೂ ಕಾರ್ಯದರ್ಶಿಗಳಾದ ಪ್ರಸಾದ್ ಬಿಲ್ಲವ ಉಪಸ್ಥಿತರಿದ್ದರು.

ರಾಜಣ್ಣ ಎಂ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಅತಿಥೇಯ ಕಾಲೇಜು, ದ್ವಿತೀಯ ಸ್ಥಾನವನ್ನು
ಎಸ್.ಎಮ್.ಎಸ್. ಕಾಲೇಜು ಬ್ರಹ್ಮಾವರ ಮತ್ತು ತೃತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ
ಪಡೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!