spot_img
Saturday, December 7, 2024
spot_img

ಕೋಟೇಶ್ವರ ಸರಕಾರಿ ಪದವಿ ಕಾಲೇಜಿನ ವಾರ್ಷಿಕೋತ್ಸವ

ಕೋಟೇಶ್ವರ :ಏಕಾಗ್ರತೆಯಿಂದ ಗುರಿಯೆಡೆಗೆ ಪಯಣಿಸಿದರೆ ಯಾವುದೇ ಸಾಧನೆ ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಪದವಿ ಶಿಕ್ಷಣದ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪ್ರಾಂಶುಪಾಲರು ಚಂದ್ರಾವತಿ ಶೆಟ್ಟಿ ಹೇಳಿದರು.

ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ-ಕೋಟೇಶ್ವರ ಇದರ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಅಧ್ಯಕ್ಷತೆ ವಹಿಸಿದ್ದರು.

ಶೈಕ್ಷಣಿಕವಾಗಿ ಸಾಧನೆ ಗೈದ ವಿದ್ಯಾರ್ಥಿಗಳ ಬಹುಮಾನಿತರ ಪಟ್ಟಿಯನ್ನು ಇತಿಹಾಸ ವಿಭಾಗದ ಮುಖ್ಯಸ್ಥ ಗಣೇಶ ಪೈ ಎಂ., ಸಾಂಸ್ಕೃತಿಕ ವಿಭಾಗದ ಬಹುಮಾನಿತರ ಪಟ್ಟಿ, ಚುನಾವಣಾ ಸಾಕ್ಷರತಾ ಸಂಘದ ಬಹುಮಾನಿತರ ಪಟ್ಟಿ ಮತ್ತು ವಿಶೇಷ ಸಾಧಕರ ಪಟ್ಟಿಯನ್ನು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಭಾಗೀರಥಿ ನಾಯ್ಕ, ಕ್ರೀಡಾ ವಿಭಾಗದ ಬಹುಮಾನಿತರ ಪಟ್ಟಿಯನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಕಿರಣ ವಿಷ್ಣು ಪಟಗಾರ, ರೋವರ್‍ಸ್-ರೇಂಜರ್‍ಸ್ ವಿಭಾಗದ ಬಹುಮಾನಿತರ ಪಟ್ಟಿಯನ್ನು ವಾಣಿಜ್ಯಶಾಸ್ತ್ರ ವಿಭಾಗದ ಕಾರ್ತಿಕ್ ಪೈ ವಾಚಿಸಿದರು. ಕಾಲೇಜಿನ ವಾರ್ಷಿಕ ವರದಿಯನ್ನು ಐಕ್ಯೂ‌ಎಸಿ ಸಂಚಾಲಕರಾದ ನಾಗರಾಜ ಯು ವಾಚಿಸಿದರು. ನಾಗರಾಜ ವೈದ್ಯ ಎಂ. ಇವರು ಪ್ರತಿಭಾ ದಿನಾಚರಣೆಯ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಡಾ. ವೆಂಕಟರಾಮ ಭಟ್ ನಿರೂಪಿಸಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಪ್ರಭಾಕರ ಖಾರ್ವಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಉಪ ಕಾರ್ಯದರ್ಶಿ ಪವಿತ್ರಾ ಮರಾಠಿ ವಂದಿಸಿದರು. ಅನಂತರ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!