spot_img
Wednesday, April 1, 2026
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಪರಾಧ ತಡೆ ಬಗ್ಗೆ ಮಾಹಿತಿ

ಕುಂದಾಪುರ: ಜೆ.ಸಿ.ಐ. ಕುಂದಾಪುರ ಸಿಟಿ ಇವರ ಸಹಯೋಗದಲ್ಲಿ ಮೇ 30ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಪರಾಧ ತಡೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಕುಂದಾಪುರದ ಪ್ರಭಾರ ಡಿ. ವೈ ಎಸ್. ಪಿ ಗೀತಾ ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅಪರಾಧಗಳನ್ನು ಹೇಗೆ ತಡೆಹಿಡಿಯಬಹುದು ಹಾಗೂ ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿರುವ ಪರಿವರ್ತತ ವ್ಯವಸ್ಥೆಗಳು ಹಾಗೂ ಅವುಗಳ ಬಳಕೆ ಬಗ್ಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಇವರು ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಪ್ರಸ್ತುತತೆಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಜೆ.ಸಿ.ಐ. ಕುಂದಾಪುರ ಸಿಟಿಯ ಅಧ್ಯಕ್ಷ ರಾಘವೇಂದ್ರ ಕುಲಾಲ್, ಮಹಿಳಾ ವಿಭಾಗದ ಅಧ್ಯಕ್ಷರಾದ ರೇಷ್ಮಾ ಕೋಟ್ಯಾನ್, ಪೂರ್ವಧ್ಯಕ್ಷರಾದ ವಿಜಯ ಭಂಡಾರಿ ಸದ್ಯಸ್ಯರಾದ ಅನಿತ್ ದ ಸೋಜಾ ಇವರು ಉಪಸ್ಥಿತರಿದ್ದರು.

ಜೆ.ಸಿ.ಐ ಕುಂದಾಪುರ ಸಿಟಿ ಸ್ಥಾಪಕ ಅಧ್ಯಕ್ಷರಾದ ಹುಸೇನ್ ಹೈಕಾಡಿ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಯೋಜಾನಾಧಿಕಾರಿ ರಾಮಚಂದ್ರ ಆಚಾರ್ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!