Sunday, September 8, 2024

ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್‌ ಪುರುಷತ್ವ ಪರೀಕ್ಷೆ ನಡೆಸಲು ಎಸ್‌ಐಟಿ ಚಿಂತನೆ

ಜನಪ್ರತಿನಿಧಿ (ಬೆಂಗಳೂರು) : ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ  ಇಂದು (ಶುಕ್ರವಾರ) ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ವಿಶೇಷ ತನಿಖಾ ತಂಡ(ಎಸ್‌ಐಟಿ) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

TNIE ಈ ಹಿಂದೆ ವರದಿ ಮಾಡಿದಂತೆ, ಮ್ಯೂನಿಚ್‌ನಿಂದ ಆಗಮಿಸಿದ 33 ವರ್ಷದ ಸಂಸದರನ್ನು ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು ಮತ್ತು ನಂತರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಕೋರಿದೆ.

ಎಸ್‌ಐಟಿ ಸದ್ಯದಲ್ಲಿಯೇ ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸಾಮರ್ಥ್ಯ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ.

ಪ್ರಜ್ವಲ್ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದು, ಅವರ ತಾಯಿ ಭವಾನಿ ರೇವಣ್ಣ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಆರೋಪಿಯಲ್ಲದಿದ್ದರೂ, ಆಕೆಯ ಪಾತ್ರದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ಬಯಸಿದೆ ಎಂದು ವರದಿಯಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ನಂತರ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಹಾಸನದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸುತ್ತಿರುವ ಪ್ರಜ್ವಲ್ ಕಳೆದ ಏಪ್ರಿಲ್ 27 ರಂದು ವಿದೇಶಕ್ಕೆ ಹೋದವರು ಇಂದು ಬೆಳಗ್ಗೆಯಷ್ಟೇ ವಾಪಸ್ಸಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!